ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಜನ ಕನ್ನಡಿಗರು, ಸಿಎಂ ಡಿಕೆಶಿ ಹೇಳಿದ್ದೇನು ನೋಡಿ

Edited By:

Updated on: Aug 31, 2026 | 2:00 PM

ನೇಪಾಳ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇನ್ನೂ 13 ಜನರು ಪತ್ತೆಯಾಗಿಲ್ಲ. ಅಧಿಕಾರಿಗಳು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಸಚಿವಾಯಲದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ರಾಜ್ಯದ ಪ್ರತಿನಿಧಿಗಳನ್ನು ನೇಪಾಳಕ್ಕೆ ಕಳುಹಿಸಲಾಗಿದ್ದು, ದೆಹಲಿಯಲ್ಲೂ ಚರ್ಚೆ ನಡೆಸಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು, ಆಗಸ್ಟ್ 31: ನೇಪಾಳದಲ್ಲಿ ಉಂಟಾದ ಭಾರಿ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಸ್ತುತ, ಇನ್ನೂ 13 ಕನ್ನಡಿಗರು ಪತ್ತೆಯಾಗಿಲ್ಲ ಎಂದು ಅವರು ಖಚಿತಪಡಿಸಿದ್ದಾರೆ. ಉಳಿದ ಕೆಲವರನ್ನು ಪತ್ತೆ ಹಚ್ಚಲಾಗಿದೆ ಎಂದಿದ್ದಾರೆ. ಕರ್ನಾಟಕದ ಅಧಿಕಾರಿಗಳು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಮತ್ತು ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಲ್ಲದೆ, ಸ್ಥಳೀಯವಾಗಿ ಕನ್ನಡಿಗರನ್ನು ಸಂಪರ್ಕಿಸಲು ಮತ್ತು ರಕ್ಷಣಾ ಕಾರ್ಯಕ್ಕೆ ನೆರವಾಗಲು ರಾಜ್ಯ ಸರ್ಕಾರದಿಂದ ಪ್ರತಿನಿಧಿಗಳನ್ನು ನೇಪಾಳಕ್ಕೆ ಕಳುಹಿಸಲಾಗಿದೆ. ನಾಪತ್ತೆಯಾದವರಲ್ಲಿ ಒಂದು ತಂಡವನ್ನು ಗುರುತಿಸಲು ಇನ್ನೂ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೆಲವು ಕನ್ನಡಿಗರೊಂದಿಗೆ ತಾವು ಈಗಾಗಲೇ ಮಾತನಾಡಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಭಾನುವಾರ ರಾತ್ರಿ ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾಗಲೂ, ಈ ವಿಷಯದ ಕುರಿತು ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ. ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us