AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದಲ್ಲಿ ಮಣ್ಣಿನಡಿ ಸಿಲುಕಿದ್ದ 2 ವರ್ಷದ ಅದೃಷ್ಟವಂತ ಮಗುವಿನ ಅಚ್ಚರಿಯ ರಕ್ಷಣೆ; ವಿಡಿಯೋ ವೈರಲ್

ನೇಪಾಳದಲ್ಲಿ ಮಣ್ಣಿನಡಿ ಸಿಲುಕಿದ್ದ 2 ವರ್ಷದ ಅದೃಷ್ಟವಂತ ಮಗುವಿನ ಅಚ್ಚರಿಯ ರಕ್ಷಣೆ; ವಿಡಿಯೋ ವೈರಲ್

ಸುಷ್ಮಾ ಚಕ್ರೆ
|

Updated on: Sep 02, 2026 | 11:29 PM

Share

ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ ಹಾಗೂ ಭೂಕುಸಿತದ ಮಧ್ಯೆ ಅದೃಷ್ಟವಂತ 2 ವರ್ಷದ ಮಗುವೊಂದು ಪವಾಡಸದೃಶವಾಗಿ ಬದುಕುಳಿದಿದೆ. ಅವಶೇಷಗಳಡಿ ಸಿಲುಕಿದ್ದ 2 ವರ್ಷದ ಮಗುವನ್ನು ರಕ್ಷಣಾಪಡೆಗಳು ಜೀವಂತವಾಗಿ ರಕ್ಷಿಸಿರುವ ಹೃದಯಸ್ಪರ್ಶಿ ಘಟನೆ ನಡೆದಿದೆ. ಭಾರಿ ಮಳೆಯಿಂದಾಗಿ ಮನೆ ಕುಸಿದು ಮಣ್ಣಿನ ರಾಶಿಯಡಿ ಸಿಲುಕಿಕೊಂಡಿದ್ದ ಮಗುವನ್ನು ರಕ್ಷಣಾ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದು, ಈ ಕ್ಷಣವು ಪ್ರತ್ಯಕ್ಷದರ್ಶಿಗಳು ಹಾಗೂ ರಕ್ಷಣಾ ಸಿಬ್ಬಂದಿಯ ಕಣ್ಣುಗಳಲ್ಲಿ ಆನಂದಭಾಷ್ಪ ತರಿಸಿದೆ.

ಕಠ್ಮಂಡು, ಸೆಪ್ಟೆಂಬರ್ 2: ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ ಹಾಗೂ ಭೂಕುಸಿತದ ಮಧ್ಯೆ ಅದೃಷ್ಟವಂತ 2 ವರ್ಷದ ಮಗುವೊಂದು ಪವಾಡಸದೃಶವಾಗಿ ಬದುಕುಳಿದಿದೆ. ಅವಶೇಷಗಳಡಿ ಸಿಲುಕಿದ್ದ 2 ವರ್ಷದ ಮಗುವನ್ನು ರಕ್ಷಣಾಪಡೆಗಳು ಜೀವಂತವಾಗಿ ರಕ್ಷಿಸಿರುವ ಹೃದಯಸ್ಪರ್ಶಿ ಘಟನೆ ನಡೆದಿದೆ. ಭಾರಿ ಮಳೆಯಿಂದಾಗಿ ಮನೆ ಕುಸಿದು ಮಣ್ಣಿನ ರಾಶಿಯಡಿ ಸಿಲುಕಿಕೊಂಡಿದ್ದ ಮಗುವನ್ನು ರಕ್ಷಣಾ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದು, ಈ ಕ್ಷಣವು ಪ್ರತ್ಯಕ್ಷದರ್ಶಿಗಳು ಹಾಗೂ ರಕ್ಷಣಾ ಸಿಬ್ಬಂದಿಯ ಕಣ್ಣುಗಳಲ್ಲಿ ಆನಂದಭಾಷ್ಪ ತರಿಸಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೇಪಾಳದಲ್ಲಿ ಸುರಿದ ಧಾರಾಕಾರ ಮಳೆಗೆ ನದಿಗಳು ಉಕ್ಕಿ ಹರಿದು, ಹಲವು ಭಾಗಗಳಲ್ಲಿ ಪ್ರಕೃತಿ ವಿಕೋಪ ಉಂಟಾಗಿದೆ. ಮನೆ ಕುಸಿದುಬಿದ್ದ ಪರಿಣಾಮ 2 ವರ್ಷದ ಮಗು ಮಣ್ಣು ಮತ್ತು ಶೀಟ್‌ಗಳ ಅಡಿಯಲ್ಲಿ ಸಂಪೂರ್ಣವಾಗಿ ಸಿಲುಕಿಕೊಂಡಿತ್ತು. ನೇಪಾಳ ಸೇನೆ, ಸಶಸ್ತ್ರ ಪೊಲೀಸ್ ಪಡೆ ಮತ್ತು ಸ್ಥಳೀಯರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸಣ್ಣ ಶಬ್ದವನ್ನು ಆಧರಿಸಿ ಮಣ್ಣನ್ನು ತೆರವುಗೊಳಿಸಲಾಯಿತು. ಆ ಮಗುವನ್ನು ಯಾವುದೇ ಗಂಭೀರ ಗಾಯಗಳಿಲ್ಲದೆ ಸುರಕ್ಷಿತವಾಗಿ ಹೊರತೆಗೆಯಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More