Nepal Flood: ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ; ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿಯ ಸೇತುವೆ
ನೇಪಾಳದಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, 400ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ತ್ರಿಶೂಲಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯೊಂದು ನೀರಿನ ರಭಸಕ್ಕೆ ಕೊಚ್ಚಿಹೋಗಿರುವ ಭೀಕರ ಘಟನೆಯ ವಿಡಿಯೋ ಇಲ್ಲಿದೆ. ತ್ರಿಶೂಲಿ ನದಿ ಸೇತುವೆ ನೀರುಪಾಲಾಗಿದೆ. ಇಂದು ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಭೀಕರ ಜಲಪ್ರಳಯ ಸಂಭವಿಸಿದ್ದು, ರಭಸವಾಗಿ ಹರಿದುಬಂದ ಪ್ರವಾಹದ ನೀರಿಗೆ ತ್ರಿಶೂಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಬೃಹತ್ ಸೇತುವೆಯೊಂದು ಕೊಚ್ಚಿಹೋಗಿದೆ. ಈ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.
ಕಠ್ಮಂಡು, ಆಗಸ್ಟ್ 26: ನೇಪಾಳದಲ್ಲಿ ಭೀಕರ ಪ್ರವಾಹ (Nepal Flash Floods) ಉಂಟಾಗಿದ್ದು, 400ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ತ್ರಿಶೂಲಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯೊಂದು ನೀರಿನ ರಭಸಕ್ಕೆ ಕೊಚ್ಚಿಹೋಗಿರುವ ಭೀಕರ ಘಟನೆಯ ವಿಡಿಯೋ ಇಲ್ಲಿದೆ. ತ್ರಿಶೂಲಿ ನದಿ ಸೇತುವೆ ನೀರುಪಾಲಾಗಿದೆ. ಇಂದು ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಭೀಕರ ಜಲಪ್ರಳಯ ಸಂಭವಿಸಿದ್ದು, ರಭಸವಾಗಿ ಹರಿದುಬಂದ ಪ್ರವಾಹದ ನೀರಿಗೆ ತ್ರಿಶೂಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಬೃಹತ್ ಸೇತುವೆಯೊಂದು ಕೊಚ್ಚಿಹೋಗಿದೆ. ಈ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಈ ಪ್ರಕೃತಿ ವಿಕೋಪದಲ್ಲಿ 95 ಜನರು ಸಾವನ್ನಪ್ಪಿದ್ದು, 105 ಭಾರತೀಯರು ಸೇರಿದಂತೆ ಅನೇಕ ವಿದೇಶಿ ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Aug 26, 2026 08:08 PM
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

