ಭಾರತದ ಇತಿಹಾಸದಲ್ಲೇ ಹೀಗಾಗಿರಲಿಲ್ಲ; ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ

Updated on: Jul 27, 2026 | 8:31 PM

"ವಿದ್ಯಾರ್ಥಿಗಳಿಗೆ ಪೆಟ್ಟು ಬಿದ್ದು, ಅವರನ್ನು ಎಳೆದೊಯ್ದ ಘಟನೆ ಭಾರತದ ಇತಿಹಾಸದಲ್ಲೇ ಎಂದೂ ಸಂಭವಿಸಿರಲಿಲ್ಲ. ಇದಕ್ಕೆ ಅಮಿತ್ ಶಾ ಅವರೇ ಹೊಣೆ!" ಎಂದು ಖರ್ಗೆ ಸದನದ ಗದ್ದಲದ ನಡುವೆಯೇ ಕಿಡಿಕಾರಿದರು. ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ವಿಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಧರಣಿ ನಡೆಸಿದರು.

ನವದೆಹಲಿ, ಜುಲೈ 27: ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ಸಮಯದಲ್ಲಿ ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸರ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಇಂದು ಗಲಾಟೆ ನಡೆಸಿದವು. ಪ್ರತಿಭಟನಾಕಾರರ ವಿರುದ್ಧದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಪಿಸಿದರು. ಭಾರತದ ಇತಿಹಾಸದಲ್ಲಿ ಈ ಹಿಂದೆ ಎಂದೂ ಈ ರೀತಿ ಆಗಿರಲಿಲ್ಲ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

“ವಿದ್ಯಾರ್ಥಿಗಳಿಗೆ ಪೆಟ್ಟು ಬಿದ್ದು, ಅವರನ್ನು ಎಳೆದೊಯ್ದ ಘಟನೆ ಭಾರತದ ಇತಿಹಾಸದಲ್ಲೇ ಎಂದೂ ಸಂಭವಿಸಿರಲಿಲ್ಲ. ಇದಕ್ಕೆ ಅಮಿತ್ ಶಾ ಅವರೇ ಹೊಣೆ!” ಎಂದು ಖರ್ಗೆ ಸದನದ ಗದ್ದಲದ ನಡುವೆಯೇ ಕಿಡಿಕಾರಿದರು. ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ವಿಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಧರಣಿ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us