ಪತನವಾಗುವ ಮುನ್ನ ಪಲ್ಟಿಯಾಗಿ ಬಿತ್ತು ವಿಮಾನ; ಅಜಿತ್ ಪವಾರ್ ಕೊನೆಯ ಕ್ಷಣಗಳ ಹೊಸ ವಿಡಿಯೋ ವೈರಲ್
ಎನ್ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿ ಅವರು ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಅವರಿದ್ದ ವಿಮಾನ ಪತನವಾಗುವ ಕೊನೆಯ ಕ್ಷಣಗಳ ಹೊಸ ವಿಡಿಯೋ ವೈರಲ್ ಆಗಿದೆ. ಈ ಹೊಸ ವಿಡಿಯೋದಲ್ಲಿ ಅಜಿತ್ ಪವಾರ್ ಅವರ ವಿಮಾನ ಅಪಘಾತಕ್ಕೂ ಮುನ್ನ ಪಲ್ಟಿಯಾಗುವುದನ್ನು ನೋಡಬಹುದು.
ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನ ಇಂದು ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗುವ ಮೊದಲು ಎಡಕ್ಕೆ ವಾಲುತ್ತಾ ಪಲ್ಟಿಯಾಗುವುದನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಮಾನವು ವೇಗವಾಗಿ ಕೆಳಗೆ ಇಳಿಯುತ್ತಾ ಎಡಕ್ಕೆ ಉರುಳುತ್ತಿರುವುದನ್ನು ನೋಡಬಹುದು. ಈ ರೀತಿ ಪಲ್ಟಿಯಾಗುವುದು ತಾಂತ್ರಿಕ ದೋಷದ ಪರಿಣಾಮವಾಗಿರಬಹುದು ಅಥವಾ ಪೈಲಟ್‌ಗಳು ವಿಮಾನದಲ್ಲಿನ ಕೆಲವು ರೀತಿಯ ಒತ್ತಡಗಳನ್ನು ಸರಿದೂಗಿಸಲು ಪ್ರಯತ್ನಿಸುತ್ತಿರಬಹುದು ಎಂದು ತಜ್ಞರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

