AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್

ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್

ಸುಷ್ಮಾ ಚಕ್ರೆ
|

Updated on:Nov 15, 2025 | 10:54 PM

Share

ನವೆಂಬರ್ 10 ರಂದು ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಮುಂದೆ ನಡೆದ ದೆಹಲಿ ಭಯೋತ್ಪಾದಕ ಸ್ಫೋಟದ ನಂತರದ ಸಿಸಿಟಿವಿ ದೃಶ್ಯಗಳು ಇಲ್ಲಿವೆ. ನವೆಂಬರ್‌ 10ರಂದು ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್‌ ಸ್ಫೋಟದ ನಂತರದ ದೃಶ್ಯವನ್ನು ದೆಹಲಿ ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸ್ಫೋಟದ ಆಘಾತದಿಂದ ಸ್ಥಳದಲ್ಲಿದ್ದ ಜನರು ಕಕ್ಕಾಬಿಕ್ಕಿಯಾಗಿರುವ ಹಾಗೂ ಆಘಾತಕ್ಕೊಳಗಾಗಿರುವ ದೃಶ್ಯ ಸೆರೆಯಾಗಿದೆ.

ನವದೆಹಲಿ, ನವೆಂಬರ್ 15: ದೆಹಲಿಯಲ್ಲಿ ಕಳೆದ ವಾರಾಂತ್ಯ ನಡೆದ ಕಾರು ಸ್ಫೋಟ (Delhi Car Blast) ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, 25ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೊಂದು ಆತ್ಮಾಹುತಿ ಕಾರ್ ಬಾಂಬ್ ದಾಳಿ ಎಂದು ತನಿಖೆಯಲ್ಲಿ ಕಂಡುಬಂದಿದೆ. ಆ ದಿನ ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದಾಗ ಅಲ್ಲಿನ ಪರಿಸ್ಥಿತಿ ಹೇಗಿತ್ತು? ಜನರ ಪ್ರತಿಕ್ರಿಯೆ ಹೇಗಿತ್ತು? ಎಂಬ ಸಿಸಿಟಿವಿ ದೃಶ್ಯಾವಳಿಯ ಹೊಸ ವಿಡಿಯೋವನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ನವೆಂಬರ್‌ 10ರಂದು ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್‌ ಸ್ಫೋಟದ ನಂತರದ ದೃಶ್ಯವನ್ನು ದೆಹಲಿ ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸ್ಫೋಟದ ಆಘಾತದಿಂದ ಸ್ಥಳದಲ್ಲಿದ್ದ ಜನರು ಕಕ್ಕಾಬಿಕ್ಕಿಯಾಗಿರುವ ಹಾಗೂ ಆಘಾತಕ್ಕೊಳಗಾಗಿರುವ ದೃಶ್ಯ ಸೆರೆಯಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 15, 2025 10:54 PM
Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More