ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್
ನವೆಂಬರ್ 10 ರಂದು ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಮುಂದೆ ನಡೆದ ದೆಹಲಿ ಭಯೋತ್ಪಾದಕ ಸ್ಫೋಟದ ನಂತರದ ಸಿಸಿಟಿವಿ ದೃಶ್ಯಗಳು ಇಲ್ಲಿವೆ. ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಫೋಟದ ನಂತರದ ದೃಶ್ಯವನ್ನು ದೆಹಲಿ ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸ್ಫೋಟದ ಆಘಾತದಿಂದ ಸ್ಥಳದಲ್ಲಿದ್ದ ಜನರು ಕಕ್ಕಾಬಿಕ್ಕಿಯಾಗಿರುವ ಹಾಗೂ ಆಘಾತಕ್ಕೊಳಗಾಗಿರುವ ದೃಶ್ಯ ಸೆರೆಯಾಗಿದೆ.
ನವದೆಹಲಿ, ನವೆಂಬರ್ 15: ದೆಹಲಿಯಲ್ಲಿ ಕಳೆದ ವಾರಾಂತ್ಯ ನಡೆದ ಕಾರು ಸ್ಫೋಟ (Delhi Car Blast) ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, 25ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೊಂದು ಆತ್ಮಾಹುತಿ ಕಾರ್ ಬಾಂಬ್ ದಾಳಿ ಎಂದು ತನಿಖೆಯಲ್ಲಿ ಕಂಡುಬಂದಿದೆ. ಆ ದಿನ ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದಾಗ ಅಲ್ಲಿನ ಪರಿಸ್ಥಿತಿ ಹೇಗಿತ್ತು? ಜನರ ಪ್ರತಿಕ್ರಿಯೆ ಹೇಗಿತ್ತು? ಎಂಬ ಸಿಸಿಟಿವಿ ದೃಶ್ಯಾವಳಿಯ ಹೊಸ ವಿಡಿಯೋವನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಫೋಟದ ನಂತರದ ದೃಶ್ಯವನ್ನು ದೆಹಲಿ ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸ್ಫೋಟದ ಆಘಾತದಿಂದ ಸ್ಥಳದಲ್ಲಿದ್ದ ಜನರು ಕಕ್ಕಾಬಿಕ್ಕಿಯಾಗಿರುವ ಹಾಗೂ ಆಘಾತಕ್ಕೊಳಗಾಗಿರುವ ದೃಶ್ಯ ಸೆರೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ