ಸಂಘಟನೆಗೆ ಮತ್ತಷ್ಟು ಬಲ ತುಂಬಲು ಪ್ಲ್ಯಾನ್: ರಾಜ್ಯ ಕಾಂಗ್ರೆಸ್ನಲ್ಲಿ ಮಹತ್ವದ ಹೊಸ ಸಮಿತಿ ರಚನೆ ಬಗ್ಗೆ ಚರ್ಚೆ
2028 ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಈಗಿನಿಂದಲೇ ತಯಾರಿ ಆರಂಭಿಸಿದೆ. ಇನ್ನೂ ಒಂದುವರೆ ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಂಘಟನೆಗೆ ಒತ್ತು ನೀಡುವಂತೆ ತಾಕೀತು ಮಾಡಲಾಗಿದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದ ಎಲ್ಲಾ ಜಿಲ್ಲಾಧ್ಯಕ್ಷರ ಸಭೆ ನಡೆಸಿದ್ದ ವೇಣುಗೋಪಾಲ್, ಸುರ್ಜೆವಾಲ ಅವರು ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಳ್ಳಿ ಎಂದು ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇದೀಗ ಸಂಘಟನೆಗೆ ಮತ್ತಷ್ಟು ಬಲ ತುಂಬಲು ರಾಜ್ಯ ಕಾಂಗ್ರೆಸ್ನಲ್ಲಿ ಮಹತ್ವದ ಹೊಸ ಸಮಿತಿ ರಚನೆ ಬಗ್ಗೆಯೂ ಪ್ಲ್ಯಾನ್ ನಡೆದಿದೆ. ಹೌದು.. ಈ ಹೊಸ ಸಮಿತಿ ಬಗ್ಗೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 19): 2028 ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಈಗಿನಿಂದಲೇ ತಯಾರಿ ಆರಂಭಿಸಿದೆ. ಇನ್ನೂ ಒಂದುವರೆ ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಂಘಟನೆಗೆ ಒತ್ತು ನೀಡುವಂತೆ ತಾಕೀತು ಮಾಡಲಾಗಿದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದ ಎಲ್ಲಾ ಜಿಲ್ಲಾಧ್ಯಕ್ಷರ ಸಭೆ ನಡೆಸಿದ್ದ ವೇಣುಗೋಪಾಲ್, ಸುರ್ಜೆವಾಲ ಅವರು ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಳ್ಳಿ ಎಂದು ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇದೀಗ ಸಂಘಟನೆಗೆ ಮತ್ತಷ್ಟು ಬಲ ತುಂಬಲು ರಾಜ್ಯ ಕಾಂಗ್ರೆಸ್ನಲ್ಲಿ ಮಹತ್ವದ ಹೊಸ ಸಮಿತಿ ರಚನೆ ಬಗ್ಗೆಯೂ ಪ್ಲ್ಯಾನ್ ನಡೆದಿದೆ. ಹೌದು.. ಈ ಹೊಸ ಸಮಿತಿ ಬಗ್ಗೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ.
ಪಕ್ಷ ಸಂಘಟನೆಗೆ ಬಲ ನೀಡಲು ರಾಜಕೀಯ ವ್ಯವಹಾರಗಳ ಸಮಿತಿ ರಚನೆ ಮಾಡುವ ಬಗ್ಗೆ ರಾಜ್ಯ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ. ಹಿರಿಯರು, ಪ್ರಭಾವಿ ನಾಯಕರನ್ನು ಒಳಗೊಂಡ 25ರಿಂದ 30 ಮಂದಿಯ ಸಮಿತಿ ರಚನೆ ಮಾಡಲು ಚಿಂತನೆಗಳು ನಡೆದಿವೆ. ಪಕ್ಷದ ಮಹತ್ವದ ನಿರ್ಧಾರ ಕೈಗೊಳ್ಳುವಾಗ ಸಮಿತಿ ಮೂಲಕ ನಿರ್ಣಯ ಹಾಗೂ ಕೆಲವು ನಾಯಕರ ಏಕಪಕ್ಷೀಯ ನಿರ್ಧಾರಗಳಿಗೆ ಬ್ರೇಕ್ ಹಾಕಲು ಸಮಿತಿ ರಚನೆ ಮಾಡಲಾಗುತ್ತಿದೆ. ಅಲ್ಲದೇ ರಾಜಕೀಯ ಹೋರಾಟ, ರಾಜಕೀಯ ಸಂಘರ್ಷಗಳ ಸಂದರ್ಭ, ಟಿಕೆಟ್ ಹಂಚಿಕೆ ಸಂದರ್ಭಗಳಲ್ಲಿ ಈ ಸಮಿತಿ ಸಭೆ ಸೇರಿ ಮಹತ್ವ ತೀರ್ಮಾನ, ಸಲಹೆಗಳನ್ನು ನೀಡಲಿದೆ.

