ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಪ್ಲ್ಯಾನ್: ರಾಜ್ಯ ಕಾಂಗ್ರೆಸ್​ನಲ್ಲಿ ಮಹತ್ವದ ಹೊಸ ಸಮಿತಿ ರಚನೆ ಬಗ್ಗೆ ಚರ್ಚೆ

Edited By:

Updated on: Sep 19, 2026 | 3:49 PM

2028 ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಈಗಿನಿಂದಲೇ ತಯಾರಿ ಆರಂಭಿಸಿದೆ. ಇನ್ನೂ ಒಂದುವರೆ ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಂಘಟನೆಗೆ ಒತ್ತು ನೀಡುವಂತೆ ತಾಕೀತು ಮಾಡಲಾಗಿದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದ ಎಲ್ಲಾ ಜಿಲ್ಲಾಧ್ಯಕ್ಷರ ಸಭೆ ನಡೆಸಿದ್ದ ವೇಣುಗೋಪಾಲ್, ಸುರ್ಜೆವಾಲ ಅವರು ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಳ್ಳಿ ಎಂದು ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇದೀಗ ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ರಾಜ್ಯ ಕಾಂಗ್ರೆಸ್​ನಲ್ಲಿ ಮಹತ್ವದ ಹೊಸ ಸಮಿತಿ ರಚನೆ ಬಗ್ಗೆಯೂ ಪ್ಲ್ಯಾನ್ ನಡೆದಿದೆ. ಹೌದು.. ಈ ಹೊಸ ಸಮಿತಿ ಬಗ್ಗೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಹೈಕಮಾಂಡ್​ ಜೊತೆ ಚರ್ಚೆ ನಡೆಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 19): 2028 ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಈಗಿನಿಂದಲೇ ತಯಾರಿ ಆರಂಭಿಸಿದೆ. ಇನ್ನೂ ಒಂದುವರೆ ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಂಘಟನೆಗೆ ಒತ್ತು ನೀಡುವಂತೆ ತಾಕೀತು ಮಾಡಲಾಗಿದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದ ಎಲ್ಲಾ ಜಿಲ್ಲಾಧ್ಯಕ್ಷರ ಸಭೆ ನಡೆಸಿದ್ದ ವೇಣುಗೋಪಾಲ್, ಸುರ್ಜೆವಾಲ ಅವರು ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಳ್ಳಿ ಎಂದು ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇದೀಗ ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ರಾಜ್ಯ ಕಾಂಗ್ರೆಸ್​ನಲ್ಲಿ ಮಹತ್ವದ ಹೊಸ ಸಮಿತಿ ರಚನೆ ಬಗ್ಗೆಯೂ ಪ್ಲ್ಯಾನ್ ನಡೆದಿದೆ. ಹೌದು.. ಈ ಹೊಸ ಸಮಿತಿ ಬಗ್ಗೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಹೈಕಮಾಂಡ್​ ಜೊತೆ ಚರ್ಚೆ ನಡೆಸಿದ್ದಾರೆ.

ಪಕ್ಷ ಸಂಘಟನೆಗೆ ಬಲ‌ ನೀಡಲು ರಾಜಕೀಯ ವ್ಯವಹಾರಗಳ ಸಮಿತಿ ರಚನೆ ಮಾಡುವ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಚರ್ಚೆಗಳು ನಡೆದಿವೆ. ಹಿರಿಯರು, ಪ್ರಭಾವಿ ನಾಯಕರನ್ನು ಒಳಗೊಂಡ 25ರಿಂದ 30 ಮಂದಿಯ ಸಮಿತಿ ರಚನೆ ಮಾಡಲು ಚಿಂತನೆಗಳು ನಡೆದಿವೆ. ಪಕ್ಷದ ಮಹತ್ವದ ನಿರ್ಧಾರ ಕೈಗೊಳ್ಳುವಾಗ ಸಮಿತಿ ಮೂಲಕ ನಿರ್ಣಯ ಹಾಗೂ ಕೆಲವು ನಾಯಕರ ಏಕಪಕ್ಷೀಯ ನಿರ್ಧಾರಗಳಿಗೆ ಬ್ರೇಕ್ ಹಾಕಲು ಸಮಿತಿ ರಚನೆ ಮಾಡಲಾಗುತ್ತಿದೆ. ಅಲ್ಲದೇ ರಾಜಕೀಯ ಹೋರಾಟ, ರಾಜಕೀಯ ಸಂಘರ್ಷಗಳ ಸಂದರ್ಭ, ಟಿಕೆಟ್​ ಹಂಚಿಕೆ ಸಂದರ್ಭಗಳಲ್ಲಿ ಈ ಸಮಿತಿ ಸಭೆ ಸೇರಿ ಮಹತ್ವ ತೀರ್ಮಾನ, ಸಲಹೆಗಳನ್ನು ನೀಡಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More