ರಾಜ್ಯದಲ್ಲಿ ಜೆಡಿಎಸ್ (JDS) ನಿಧಾನವಾಗಿ ಚುನಾವಣಾ ಪ್ರಚಾರ ಆರಂಭಿಸಿದೆ. 2023ರ ಚುನಾವಣೆಯಲ್ಲಿ ಗೆಲ್ಲಲೇ ಬೇಕು ಅಂತ ಪಣ ತೊಟ್ಟಿದೆ. ಈ ನಡುವೆ ಇತ್ತೀಚಿಗೆ ನವ ದಂಪತಿಗಳು ಮದುವೆ ದಿನದಂದು ಚುನಾವಣೆಯಲ್ಲಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಮತ ನೀಡಿ, ಬೆಂಬಲಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಇಂತಹದ್ದೊಂದು ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ನಡೆದಿದೆ. ಮದುವೆಯಲ್ಲಿ ವಧು-ವರ ಮಾಜಿ ಸಿಎಂ ಕುಮಾರಸ್ವಾಮಿಯನ್ನು ಜಪ ಮಾಡಿದ್ದಾರೆ. ವೇದಿಕೆಯಲ್ಲಿ ಕುಮಾರಣ್ಣನನ್ನು ಬೆಂಬಲಿಸಿ ಎಂದು ಬಿತ್ತಿ ಪತ್ರ ಪ್ರದರ್ಶನ ಮಾಡಿ, ರಾಜ್ಯದ ಸಮಗ್ರ ನೀರಾವರಿಗಾಗಿ 2023 ಚುನಾವಣೆಯಲ್ಲಿ ಕುಮಾರಣ್ಣನಿಗೆ ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ. ಜಗದೀಶ್ ನೀಡಗುಂದಿ ಮಠ, ಪೂಜಾ ಎನ್ನುವ ನೂತನ ವಧು-ವರ ಮನವಿ ಮಾಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.