ಮುಂದಿನ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿಗೆ ಮತ ನೀಡಿ ಎಂದು ಮದುವೆ ಮನೆಯಲ್ಲಿ ಮನವಿ ಮಾಡಿದ ನವ ದಂಪತಿ; ವೈರಲ್ ಆದ ವಿಡಿಯೋ ಇದೆ

Edited By: sandhya thejappa

Updated on: May 14, 2022 | 8:54 AM

ವೇದಿಕೆಯಲ್ಲಿ ಕುಮಾರಣ್ಣನನ್ನು ಬೆಂಬಲಿಸಿ ಎಂದು ಬಿತ್ತಿ ಪತ್ರ ಪ್ರದರ್ಶನ ಮಾಡಿ, ರಾಜ್ಯದ ಸಮಗ್ರ ನೀರಾವರಿಗಾಗಿ 2023 ಚುನಾವಣೆಯಲ್ಲಿ ಕುಮಾರಣ್ಣನಿಗೆ ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್ (JDS) ನಿಧಾನವಾಗಿ ಚುನಾವಣಾ ಪ್ರಚಾರ ಆರಂಭಿಸಿದೆ. 2023ರ ಚುನಾವಣೆಯಲ್ಲಿ ಗೆಲ್ಲಲೇ ಬೇಕು ಅಂತ ಪಣ ತೊಟ್ಟಿದೆ. ಈ ನಡುವೆ ಇತ್ತೀಚಿಗೆ ನವ ದಂಪತಿಗಳು ಮದುವೆ ದಿನದಂದು ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಮತ ನೀಡಿ, ಬೆಂಬಲಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಇಂತಹದ್ದೊಂದು ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ನಡೆದಿದೆ. ಮದುವೆಯಲ್ಲಿ ವಧು-ವರ ಮಾಜಿ ಸಿಎಂ ಕುಮಾರಸ್ವಾಮಿಯನ್ನು ಜಪ ಮಾಡಿದ್ದಾರೆ. ವೇದಿಕೆಯಲ್ಲಿ ಕುಮಾರಣ್ಣನನ್ನು ಬೆಂಬಲಿಸಿ ಎಂದು ಬಿತ್ತಿ ಪತ್ರ ಪ್ರದರ್ಶನ ಮಾಡಿ, ರಾಜ್ಯದ ಸಮಗ್ರ ನೀರಾವರಿಗಾಗಿ 2023 ಚುನಾವಣೆಯಲ್ಲಿ ಕುಮಾರಣ್ಣನಿಗೆ ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ. ಜಗದೀಶ್ ನೀಡಗುಂದಿ ಮಠ, ಪೂಜಾ ಎನ್ನುವ ನೂತನ ವಧು-ವರ ಮನವಿ ಮಾಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Published on: May 14, 2022 08:53 AM
Loading...
Unable to load recommendations.
Follow Us
TV9 Web

TV9 Kannada

Read More