DG-IGP Presser: ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಡಿಕೆ ಶಿವಕುಮಾರ್ ರೇಗಾಡಿದ್ದರ ಬಗ್ಗೆ ಹೊಸ ಡಿಜಿ-ಐಜಿಪಿ ಅಲೋಕ್ ಮೋಹನ್ ಬಾಯಿ ಬಿಡಲಿಲ್ಲ

DG-IGP Presser: ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಡಿಕೆ ಶಿವಕುಮಾರ್ ರೇಗಾಡಿದ್ದರ ಬಗ್ಗೆ ಹೊಸ ಡಿಜಿ-ಐಜಿಪಿ ಅಲೋಕ್ ಮೋಹನ್ ಬಾಯಿ ಬಿಡಲಿಲ್ಲ

ಅರುಣ್​ ಕುಮಾರ್​ ಬೆಳ್ಳಿ
|

Updated on: May 25, 2023 | 7:04 PM

ಇಂದು ಅಧಿಕಾರ ವಹಿಸಿಕೊಂಡ ಬಳಿಕ ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರು ಪತರ್ಕರ್ತರ ಎಲ್ಲ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದರು.

ಬೆಂಗಳೂರು: ರಾಜ್ಯದ ಹೊಸ ಡಿಜಿ-ಐಜಿಪಿ ಅಲೋಕ್ ಮೋಹನ್ (Alok Mohan) ಬೆಂಗಳೂರು ನಗರ ಮಾತ್ರವಲ್ಲ ಇಡೀ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಉತ್ತಮ ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ಇಂದು ಅಧಿಕಾರ ವಹಿಸಿಕೊಂಡ ಬಳಿಕ ನಡೆಸಿದ ಸುದ್ದಿಗೋಷ್ಟಿಯಲ್ಲಿ (presser) ಅವರು ಪತರ್ಕರ್ತರ ಎಲ್ಲ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದರು. ಆದರೆ ಮೊನ್ನೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ರೇಗಾಡಿದ್ದ ಬಗ್ಗೆ ಮಾತ್ರ ಅವರು ಏನನ್ನೂ ಹೇಳಲಿಲ್ಲ. ಆ ಸಭೆ ಸರ್ಕಾರ ಮತ್ತು ತಮ್ಮ ಅಧಿಕಾರಿಗಳ ನಡುವೆ ನಡೆದಿದ್ದು, ವಿವರಗಳನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಳ್ಳುವುದು ಸಾಧ್ಯವಿಲ್ಲ ಎಂದು ಖಡಾಖಂಡಿತವಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ