ಜುಲೈನಿಂದ ಬಿಜೆಪಿಯಲ್ಲಿ ಹೊಸ ಯುಗ ಆರಂಭ, ಕುಟುಂಬ ರಾಜಕಾರಣ ಅಂತ್ಯ: ಹೆಸರೇಳದೆ ವಿಜಯೇಂದ್ರಗೆ ಯತ್ನಾಳ್ ಟಾಂಗ್
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ನೇರ ಮತ್ತು ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇದೀಗ ಮತ್ತೆ ಯತ್ನಾಳ್ ಅವರು ವಿಜಯೇಂದ್ರ ಹೆಸರು ಹೇಳದೆ ಟಾಂಗ್ ಕೊಟ್ಟಿದ್ದಾರೆ. ಜುಲೈನಿಂದ ದೇಶದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗಲಿದೆ, ಬಿಜೆಪಿಯಲ್ಲಿ ಹೊಸ ಯುಗ ಆರಂಭವಾಗಲಿದೆ ಎಂದಿದ್ದಾರೆ.
ವಿಜಯಪುರ, ಜ.14: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮೇಲಿಂದ ಮೇಲೆ ವಾಗ್ದಾಳಿ ನಡೆಸುತ್ತಿರುತ್ತಾರೆ. ಇದೀಗ ಹೆಸರೇಳದೆ ವಿಜಯೇಂದ್ರಗೆ ಟಾಂಗ್ ಕೊಟ್ಟ ಯತ್ನಾಳ್, 2024 ರ ಚುನಾವಣೆಯ ನಂತರ ದೇಶದಲ್ಲಿ ವಂಶಪಾರಂಪರ್ಯ ರಾಜಕಾರಣ, ಭ್ರಷ್ಟಾಚಾರ, ಹೊಂದಾಣಿಕೆ ರಾಜಕಾರಣ ಅಂತ್ಯವಾಗಲಿದೆ. ಜೂನ್-ಜುಲೈವರೆಗೆ ಕಾದು ನೋಡಿ. ಜುಲೈನಲ್ಲಿ ಬಿಜೆಪಿ ಪಕ್ಷದಲ್ಲಿ ಹೊಸ ಯುಗ ಆರಂಭವಾಗಲಿದೆ ಎಂದರು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos