ದೇಶದ ಜನತೆಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ? ಯಾವಾಗಿನಿಂದ ಜಾರಿ?
ದಸರಾಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು...ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆ ಮೇಲೆ ನಿಂತು ಜಿಎಸ್‌ಟಿ ತೆರಿಗೆ ಇಳಿಕೆ ಘೋಷಿಸಿದ್ದರು. ಇದೀಗ ಈ ಘೋಷಣೆ ಜಾರಿಗೆ ಬರುತ್ತಿದೆ. ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ನೀತಿ ಕುರಿತು ಮಾಹಿತಿ ನೀಡಿದರು.
ನವದೆಹಲಿ, (ಸೆಪ್ಟೆಂಬರ್ 03): ದೇಶದ ಜನತೆಗೆ ನರೇಂದ್ರ ಮೋದಿ ಸರ್ಕಾರ ದಸರಾ ಗಿಫ್ಟ್ ಕೊಟ್ಟಿದೆ. ಹೌದು…ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆ ಮೇಲೆ ನಿಂತು ಜಿಎಸ್‌ಟಿ ತೆರಿಗೆ ಇಳಿಕೆ ಘೋಷಿಸಿದ್ದರು. ಇದೀಗ ಈ ಘೋಷಣೆ ಜಾರಿಗೆ ಬರುತ್ತಿದೆ. ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ನೀತಿ ಕುರಿತು ಮಾಹಿತಿ ನೀಡಿದ್ದು, ಇನ್ನು ಮುಂದೆ ಎರಡು ಸ್ಲ್ಯಾಬ್ ಇರಲಿದೆ. ಈ ಮೂಲಕ ಹಲವು ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ತೆರಿಗೆ ಇಳಿಕೆಯಾಗಲಿದೆ. ಕೇವಲ ಶೇಕಡಾ 5 ಹಾಗೂ 18 ಮಾತ್ರ. ಇನ್ನು ಯಾವೆಲ್ಲಾ ವಸ್ತುಗಳಿಗೆ ಜಿಎಸ್ ಟಿಯಿಂದ ವಿನಾಯಿತಿ ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
Published on: Sep 03, 2025 11:32 PM
Latest Videos

