ದೇಶದ ಜನತೆಗೆ ಗುಡ್​ ನ್ಯೂಸ್ ಕೊಟ್ಟ ಮೋದಿ ಸರ್ಕಾರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ? ಯಾವಾಗಿನಿಂದ ಜಾರಿ?

Updated on: Sep 03, 2025 | 11:36 PM

ದಸರಾಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು...ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆ ಮೇಲೆ ನಿಂತು ಜಿಎಸ್‌ಟಿ ತೆರಿಗೆ ಇಳಿಕೆ ಘೋಷಿಸಿದ್ದರು. ಇದೀಗ ಈ ಘೋಷಣೆ ಜಾರಿಗೆ ಬರುತ್ತಿದೆ. ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ನೀತಿ ಕುರಿತು ಮಾಹಿತಿ ನೀಡಿದರು.

ನವದೆಹಲಿ, (ಸೆಪ್ಟೆಂಬರ್ 03): ದೇಶದ ಜನತೆಗೆ ನರೇಂದ್ರ ಮೋದಿ ಸರ್ಕಾರ ದಸರಾ ಗಿಫ್ಟ್ ಕೊಟ್ಟಿದೆ. ಹೌದು…ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆ ಮೇಲೆ ನಿಂತು ಜಿಎಸ್‌ಟಿ ತೆರಿಗೆ ಇಳಿಕೆ ಘೋಷಿಸಿದ್ದರು. ಇದೀಗ ಈ ಘೋಷಣೆ ಜಾರಿಗೆ ಬರುತ್ತಿದೆ. ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ನೀತಿ ಕುರಿತು ಮಾಹಿತಿ ನೀಡಿದ್ದು, ಇನ್ನು ಮುಂದೆ ಎರಡು ಸ್ಲ್ಯಾಬ್ ಇರಲಿದೆ. ಈ ಮೂಲಕ ಹಲವು ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ತೆರಿಗೆ ಇಳಿಕೆಯಾಗಲಿದೆ. ಕೇವಲ ಶೇಕಡಾ 5 ಹಾಗೂ 18 ಮಾತ್ರ. ಇನ್ನು ಯಾವೆಲ್ಲಾ ವಸ್ತುಗಳಿಗೆ ಜಿಎಸ್​ ಟಿಯಿಂದ ವಿನಾಯಿತಿ ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

Published on: Sep 03, 2025 11:32 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More