ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!

Updated on: Mar 01, 2026 | 12:38 PM

ಡಿಸಿಎಂ ಡಿಕೆ ಶಿವಕುಮಾರ್ ಕುಟುಂಬದವರು ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಒಲವು ತೋರಿಸಿದ್ದು, ಮಹೀಂದ್ರಾ ಕಂಪನಿಯ 3 ಕಾರುಗಳು ಅವರ ಬೆಂಗಳೂರಿನ ನಿವಾಸಕ್ಕೆ ಬಂದಿವೆ. ಇವುಗಳನ್ನು ಪರಿಶೀಲಿ ನಂತರ ಡಿಸಿಎಂ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಕೆಲವು ದಿನಗಳ ಹಿಂದಷ್ಟೇ ಡಿಕೆಶಿ ಹೊಸ ಐಷಾರಾಮಿ ಕಾರು ಖರೀದಿಸಿದ್ದರೆಂಬುದು ಗಮನಾರ್ಹ.

ಬೆಂಗಳೂರು, ಮಾರ್ಚ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬ ಎಲೆಕ್ಟ್ರಿಕ್ ಕಾರು ಖರೀದಿಗೆ ಮುಂದಾಗಿದ್ದು, ಮಹೀಂದ್ರಾ ಕಂಪನಿಯ 3 ಕಾರುಗಳನ್ನು ಕಂಪನಿಯವರು ಬೆಂಗಳೂರಿನ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸಕ್ಕೆ ಕಳುಹಿಸಿಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಕಾರುಗಳ ವೀಕ್ಷಣೆ ಮಾಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್ 2 ಕೋಟಿ ರೂಪಾಯಿಯ ಹೊಸ Lexus LM 350h 7 ಸೀಟರ್ ಕಾರು ಖರೀದಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More