ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

Edited By:

Updated on: Jul 16, 2026 | 6:50 PM

ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೆ.ಹೆಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಜಿಪಿಎಸ್ ಆಧಾರಿತ ಕಮಾಂಡ್ ಸೆಂಟರ್ ಸ್ಥಾಪಿಸಲಾಗುತ್ತಿದೆ. ರೈತರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ರಾಗಿ, ಜೋಳ ಮತ್ತು ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲಾಗಿದ್ದು, ರಾಗಿಗೆ ಹೆಚ್ಚಿದ ಬೇಡಿಕೆಯು ರೈತರಿಗೆ ಹೆಚ್ಚಿನ ಲಾಭ ತಂದುಕೊಡಲಿದೆ.

ಬೆಂಗಳೂರು, ಜುಲೈ 16: ‘‘ರಾಜ್ಯದಲ್ಲಿ ಅಕ್ರಮ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ’’ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಸ್ಮಾರ್ಟ್ ಪಿಡಿಎಸ್ ಸುಧಾರಣೆಗಳ ಭಾಗವಾಗಿ, ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಪಾಸ್ ಯಂತ್ರಗಳು ಮತ್ತು ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಇದು ಗ್ರಾಹಕರಿಗೆ ತೂಕದಲ್ಲಿ ಆಗುತ್ತಿದ್ದ ಸಮಸ್ಯೆಗಳನ್ನು ನಿವಾರಿಸಲಿದೆ. ಜೊತೆಗೆ, ವಿತರಣಾ ವಾಹನಗಳಿಗೆ ಜಿಪಿಎಸ್ ಅಳವಡಿಸಿ, ಅವುಗಳ ಚಲನವಲನವನ್ನು ಪತ್ತೆಹಚ್ಚಲು ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗುತ್ತಿದೆ. ಇದು ಕಮಿಷನರ್ ಕಚೇರಿ ಮತ್ತು ಫುಡ್ ಕಾರ್ಪೊರೇಷನ್ ಎಂಡಿ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದ್ದು, ಪಡಿತರ ಬಡವರಿಗೆ ಸರಿಯಾಗಿ ತಲುಪುವುದನ್ನು ಖಚಿತಪಡಿಸುತ್ತದೆ’’ ಎಂದು ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More