New SIM Card: ಹೊಸ ಸಿಮ್ ಕಾರ್ಡ್ ಬೇಕಾದ್ರೆ ಈ ರೂಲ್ಸ್ ಫಾಲೋ ಮಾಡ್ಲೇಬೇಕು!

New SIM Card: ಹೊಸ ಸಿಮ್ ಕಾರ್ಡ್ ಬೇಕಾದ್ರೆ ಈ ರೂಲ್ಸ್ ಫಾಲೋ ಮಾಡ್ಲೇಬೇಕು!

ಕಿರಣ್​ ಐಜಿ
|

Updated on: Jan 14, 2024 | 6:07 PM

ಹಲವು ಸಂದರ್ಭಗಳಲ್ಲಿ ನಕಲಿ ಸಿಮ್ ಕಾರ್ಡ್ ಕೂಡ ಇದಕ್ಕೆ ಕಾರಣವಾಗಿರುತ್ತದೆ. ದೂರಸಂಪರ್ಕ ಇಲಾಖೆ ನಕಲಿ ಸಿಮ್ ಕಾರ್ಡ್‌ಗಳಿಗೆ ಸಂಬಂಧಿಸಿದ ವಂಚನೆಗಳನ್ನು ತಡೆಗಟ್ಟಲು ಈಗಾಗಲೇ ದೇಶದಲ್ಲಿ ಹೊಸ ನಿಯಮ ಜಾರಿಗೆ ತಂದಿದೆ. ನಕಲಿ ಸಿಮ್ ಕಾರ್ಡ್‌ಗಳಿಗೆ ಲಿಂಕ್ ಮಾಡಲಾದ ವಂಚನೆಗಳನ್ನು ಪರಿಹರಿಸಲು ಈ ನಿಯಮಗಳನ್ನು ರೂಪಿಸಲಾಗಿದೆ.

ದೇಶದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳ ಸಂಖ್ಯೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಜನರನ್ನು ಎಚ್ಚರಿಸಲು ಮತ್ತು ವಿವಿಧ ಮಾಹಿತಿ ನೀಡಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದರೂ, ಸೈಬರ್ ವಂಚನೆ ಪ್ರಕರಣ ಕಡಿಮೆಯಾಗುತ್ತಿಲ್ಲ. ಹಲವು ಸಂದರ್ಭಗಳಲ್ಲಿ ನಕಲಿ ಸಿಮ್ ಕಾರ್ಡ್ ಕೂಡ ಇದಕ್ಕೆ ಕಾರಣವಾಗಿರುತ್ತದೆ. ದೂರಸಂಪರ್ಕ ಇಲಾಖೆ ನಕಲಿ ಸಿಮ್ ಕಾರ್ಡ್‌ಗಳಿಗೆ ಸಂಬಂಧಿಸಿದ ವಂಚನೆಗಳನ್ನು ತಡೆಗಟ್ಟಲು ಈಗಾಗಲೇ ದೇಶದಲ್ಲಿ ಹೊಸ ನಿಯಮ ಜಾರಿಗೆ ತಂದಿದೆ. ನಕಲಿ ಸಿಮ್ ಕಾರ್ಡ್‌ಗಳಿಗೆ ಲಿಂಕ್ ಮಾಡಲಾದ ವಂಚನೆಗಳನ್ನು ಪರಿಹರಿಸಲು ಈ ನಿಯಮಗಳನ್ನು ರೂಪಿಸಲಾಗಿದೆ.