ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಗ್ರಾಹಕರೋ ವ್ಯಾಪಾರಿಗಳೋ? ಇಲ್ಲಿದೆ ಉತ್ತರ
ಕೇಂದ್ರ ಸರ್ಕಾರವು ಯುಪಿಐ ವಾಣಿಜ್ಯ ವಹಿವಾಟುಗಳಿಗೆ ಹೊಸ ಶುಲ್ಕ ನಿಯಮಗಳನ್ನು ಜಾರಿಗೊಳಿಸಿದೆ. 2,000 ರೂ.ಗಿಂತ ಹೆಚ್ಚಿನ ವಹಿವಾಟುಗಳಿಗೆ ಶೇ 0.4 ಶುಲ್ಕ ವಿಧಿಸಲಾಗಿದ್ದು, ಇದನ್ನು ವರ್ತಕರು ಪಾವತಿಸಬೇಕು. ಗ್ರಾಹಕರಿಗೆ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಹಣ ವರ್ಗಾವಣೆಗೆ ಯುಪಿಐ ಉಚಿತವಾಗಿಯೇ ಮುಂದುವರಿಯಲಿದೆ. ಈ ನಿಯಮಗಳು 2026ರ ಅಕ್ಟೋಬರ್ 15ರಿಂದ ಜಾರಿಯಾಗಲಿವೆ.
ಬೆಂಗಳೂರು, ಸೆಪ್ಟೆಂಬರ್ 16: ಕೇಂದ್ರ ಸರ್ಕಾರವು ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವದ ಹೊಸ ನಿಯಮಗಳನ್ನು ಘೋಷಿಸಿದೆ. 2,000 ರೂಗಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ಶೇಕಡಾ 0.4 ರಷ್ಟು ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ. ಈ ನೂತನ ನಿಯಮಾವಳಿಗಳು 2026ರ ಅಕ್ಟೋಬರ್ 15ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ.
ಈ ಶುಲ್ಕವನ್ನು ಗ್ರಾಹಕರು ಭರಿಸಬೇಕಾಗಿಲ್ಲ. ಬದಲಾಗಿ, ಯುಪಿಐ ಮೂಲಕ ಹಣವನ್ನು ಸ್ವೀಕರಿಸುವ ವರ್ತಕರು ಅಥವಾ ವ್ಯಾಪಾರಿಗಳು ಈ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಉದಾಹರಣೆಗೆ, 3,000 ರೂ. ವಹಿವಾಟಿಗೆ 12 ರೂ., 50,000 ರೂ. ವಹಿವಾಟಿಗೆ 200 ರೂ. ಶುಲ್ಕ ಬೀಳುತ್ತದೆ. 75,000 ರೂ.ಗಿಂತ ಹೆಚ್ಚಿನ ಮೊತ್ತಕ್ಕೆ ಗರಿಷ್ಠ 300 ರೂ. ಶುಲ್ಕ ನಿಗದಿಪಡಿಸಲಾಗಿದೆ.
ವ್ಯಕ್ತಿಯಿಂದ ವ್ಯಕ್ತಿಗೆ ಹಣ ವರ್ಗಾವಣೆ ಅಥವಾ ಸಾಮಾನ್ಯ ಸಾರ್ವಜನಿಕ ಪಾವತಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಂದರೆ, ಫೋನ್‌ಪೇ , ಗೂಗಲ್ ಪೇ ಅಂತಹ ಅಪ್ಲಿಕೇಶನ್‌ಗಳ ಮೂಲಕ ಸ್ನೇಹಿತರಿಗೆ ಅಥವಾ ಕುಟುಂಬ ಸದಸ್ಯರಿಗೆ ಹಣ ಕಳುಹಿಸಿದರೆ ಅದು ಸಂಪೂರ್ಣ ಉಚಿತವಾಗಿರುತ್ತದೆ. ಶಾಲಾ ಶುಲ್ಕ, ನೀರಿನ ಬಿಲ್, ವಿದ್ಯುತ್ ಬಿಲ್ ಹಾಗೂ ರೈಲ್ವೆ ಟಿಕೆಟ್ ಬುಕಿಂಗ್‌ನಂತಹ ಸೇವೆಗಳಿಗೂ ಶುಲ್ಕ ಅನ್ವಯವಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು

