ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಗ್ರಾಹಕರೋ ವ್ಯಾಪಾರಿಗಳೋ? ಇಲ್ಲಿದೆ ಉತ್ತರ

Edited By:

Updated on: Sep 16, 2026 | 5:50 PM

ಕೇಂದ್ರ ಸರ್ಕಾರವು ಯುಪಿಐ ವಾಣಿಜ್ಯ ವಹಿವಾಟುಗಳಿಗೆ ಹೊಸ ಶುಲ್ಕ ನಿಯಮಗಳನ್ನು ಜಾರಿಗೊಳಿಸಿದೆ. 2,000 ರೂ.ಗಿಂತ ಹೆಚ್ಚಿನ ವಹಿವಾಟುಗಳಿಗೆ ಶೇ 0.4 ಶುಲ್ಕ ವಿಧಿಸಲಾಗಿದ್ದು, ಇದನ್ನು ವರ್ತಕರು ಪಾವತಿಸಬೇಕು. ಗ್ರಾಹಕರಿಗೆ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಹಣ ವರ್ಗಾವಣೆಗೆ ಯುಪಿಐ ಉಚಿತವಾಗಿಯೇ ಮುಂದುವರಿಯಲಿದೆ. ಈ ನಿಯಮಗಳು 2026ರ ಅಕ್ಟೋಬರ್ 15ರಿಂದ ಜಾರಿಯಾಗಲಿವೆ.

ಬೆಂಗಳೂರು, ಸೆಪ್ಟೆಂಬರ್ 16: ಕೇಂದ್ರ ಸರ್ಕಾರವು ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವದ ಹೊಸ ನಿಯಮಗಳನ್ನು ಘೋಷಿಸಿದೆ. 2,000 ರೂಗಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ಶೇಕಡಾ 0.4 ರಷ್ಟು ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ. ಈ ನೂತನ ನಿಯಮಾವಳಿಗಳು 2026ರ ಅಕ್ಟೋಬರ್ 15ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ.

ಈ ಶುಲ್ಕವನ್ನು ಗ್ರಾಹಕರು ಭರಿಸಬೇಕಾಗಿಲ್ಲ. ಬದಲಾಗಿ, ಯುಪಿಐ ಮೂಲಕ ಹಣವನ್ನು ಸ್ವೀಕರಿಸುವ ವರ್ತಕರು ಅಥವಾ ವ್ಯಾಪಾರಿಗಳು ಈ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಉದಾಹರಣೆಗೆ, 3,000 ರೂ. ವಹಿವಾಟಿಗೆ 12 ರೂ., 50,000 ರೂ. ವಹಿವಾಟಿಗೆ 200 ರೂ. ಶುಲ್ಕ ಬೀಳುತ್ತದೆ. 75,000 ರೂ.ಗಿಂತ ಹೆಚ್ಚಿನ ಮೊತ್ತಕ್ಕೆ ಗರಿಷ್ಠ 300 ರೂ. ಶುಲ್ಕ ನಿಗದಿಪಡಿಸಲಾಗಿದೆ.

ವ್ಯಕ್ತಿಯಿಂದ ವ್ಯಕ್ತಿಗೆ ಹಣ ವರ್ಗಾವಣೆ ಅಥವಾ ಸಾಮಾನ್ಯ ಸಾರ್ವಜನಿಕ ಪಾವತಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಂದರೆ, ಫೋನ್‌ಪೇ , ಗೂಗಲ್ ಪೇ ಅಂತಹ ಅಪ್ಲಿಕೇಶನ್‌ಗಳ ಮೂಲಕ ಸ್ನೇಹಿತರಿಗೆ ಅಥವಾ ಕುಟುಂಬ ಸದಸ್ಯರಿಗೆ ಹಣ ಕಳುಹಿಸಿದರೆ ಅದು ಸಂಪೂರ್ಣ ಉಚಿತವಾಗಿರುತ್ತದೆ. ಶಾಲಾ ಶುಲ್ಕ, ನೀರಿನ ಬಿಲ್, ವಿದ್ಯುತ್ ಬಿಲ್ ಹಾಗೂ ರೈಲ್ವೆ ಟಿಕೆಟ್ ಬುಕಿಂಗ್‌ನಂತಹ ಸೇವೆಗಳಿಗೂ ಶುಲ್ಕ ಅನ್ವಯವಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More