ಟೇಕಾಫ್ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 241 ಜನರು ಸಾವನ್ನಪ್ಪಿದ್ದಾರೆ. 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಇಂದು ಮಧ್ಯಾಹ್ನ 1.17 ಕ್ಕೆ ಲಂಡನ್‌ಗೆ ಹೊರಟಾಗ ಈ ಘಟನೆ ಸಂಭವಿಸಿದೆ. ಈ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್‌ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಕಾಣಿಸಿಕೊಂಡಿತ್ತು.
ಅಹಮದಾಬಾದ್, ಜೂನ್ 12: ಇಂದು ಅಹಮದಾಬಾದ್ (Ahmedabad Plane Crash) ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಏರ್ ಇಂಡಿಯಾ (Air India) ವಿಮಾನ 5 ನಿಮಿಷಗಳೊಳಗೆ ಪತನವಾಗಿದೆ. ಈ ಭೀಕರ ದುರಂತದಲ್ಲಿ ವಿಮಾನದಲ್ಲಿದ್ದ 241 ಜನರು ಮೃತಪಟ್ಟಿದ್ದು, ಆ ವಿಮಾನ ಡಿಕ್ಕಿ ಹೊಡೆದ ಹಾಸ್ಟೆಲ್ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ. ಅಹಮದಾಬಾದ್‌ನಲ್ಲಿ ಭೀಕರ ಅಪಘಾತಕ್ಕೂ ಮುನ್ನ ಏರ್ ಇಂಡಿಯಾ ವಿಮಾನದ ಅಂತಿಮ ಕ್ಷಣಗಳನ್ನು ತೋರಿಸುವ ಹೊಸ ವೀಡಿಯೊ ಇಲ್ಲಿದೆ. ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾದ ಏರ್ ಇಂಡಿಯಾದ ಕೊನೆಯ 50 ಸೆಕೆಂಡ್ಗಳ ವಿಡಿಯೋ ಇದು. ಟೇಕ್ಆಫ್ ಆದಾಗಲೇ ಮೇಲೆ ಹಾರಲು ತಾಂತ್ರಿಕ ಸಮಸ್ಯೆ ಅನುಭವಿಸುತ್ತಿದ್ದಂತೆ ಕಾಣುವ ಈ ವಿಮಾನ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ. ಬಳಿಕ ಆಕಾಶದ ತುಂಬ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ