New Year 2026: ಹೊಸ ವರ್ಷಾಚರಣೆ ವೇಳೆ ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ ಮಹಿಳಾ ಸಹಾಯ ಕೇಂದ್ರ

Edited By:

Updated on: Dec 31, 2025 | 11:19 AM

Security for New Year 2026 Celebration: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿದ್ದಾರೆ. ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್ ಸೇರಿದಂತೆ ನಗರದಾದ್ಯಂತ 50ಕ್ಕೂ ಹೆಚ್ಚು ಮಹಿಳಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಹಾಯ, ದೂರು ನೋಂದಣಿ ಮತ್ತು ವೈದ್ಯಕೀಯ ನೆರವು ನೀಡುವುದು ಈ ಕೇಂದ್ರಗಳ ಮುಖ್ಯ ಉದ್ದೇಶವಾಗಿದೆ.

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರು ವ್ಯಾಪಕ ಭದ್ರತಾ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ವಿಶೇಷವಾಗಿ ಮಹಿಳೆಯರ ಸುರಕ್ಷತೆಗಾಗಿ ನಗರದ ಪ್ರಮುಖ ಪ್ರದೇಶಗಳಲ್ಲಿ ಮಹಿಳಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹೊಸ ವರ್ಷದ ರಾತ್ರಿಯ ಭದ್ರತೆಯ ಪ್ರಮುಖ ಭಾಗವಾಗಿರುವ ಈ ಕೇಂದ್ರಗಳು, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್, ಎಂಜಿ ರೋಡ್, ಕೋರಮಂಗಲ, ಇಂದಿರಾನಗರ, ನೀಲಾದ್ರಿ ರಸ್ತೆ ಮತ್ತು ಬಾಣಸವಾಡಿ ಸೇರಿದಂತೆ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

ಈ ಮಹಿಳಾ ಸಹಾಯ ಕೇಂದ್ರಗಳು ತುರ್ತು ಸಂದರ್ಭಗಳಲ್ಲಿ ಮಹಿಳೆಯರಿಗೆ ನೆರವು ನೀಡಲು ಮೀಸಲಾಗಿವೆ. ಯಾವುದೇ ಸಮಸ್ಯೆ ಅಥವಾ ಆರೋಗ್ಯ ಸಮಸ್ಯೆ ಎದುರಾದಾಗ, ಮಹಿಳೆಯರು ನೇರವಾಗಿ ಈ ಕೇಂದ್ರಗಳಿಗೆ ಭೇಟಿ ನೀಡಿ ದೂರುಗಳನ್ನು ದಾಖಲಿಸಬಹುದು ಅಥವಾ ಸಹಾಯ ಪಡೆಯಬಹುದು. ಪೊಲೀಸ್ ಅಧಿಕಾರಿಗಳು, ಮಹಿಳಾ ಪೊಲೀಸರು ಮತ್ತು ಬಿಬಿಎಂಪಿ ಆರೋಗ್ಯ ಸಿಬ್ಬಂದಿ ಈ ಕೇಂದ್ರಗಳಲ್ಲಿ ಲಭ್ಯವಿರುತ್ತಾರೆ. ಅಗತ್ಯವಿದ್ದರೆ, ಇಲ್ಲಿಂದ ಕ್ಯಾಬ್ ವ್ಯವಸ್ಥೆ ಮಾಡುವುದು ಅಥವಾ ವೈದ್ಯಕೀಯ ಚಿಕಿತ್ಸೆಗೆ ಒದಗಿಸುವುದು ಮುಂತಾದ ಸೇವೆಗಳನ್ನು ನೀಡಲಾಗುತ್ತದೆ. ಈ ಮೂಲಕ ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಮಹಿಳೆಯರು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದು ಆದ್ಯತೆಯಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 31, 2025 11:18 AM