ಹೊಸ ವರ್ಷಕ್ಕೆ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಹೊಸ ವರ್ಷಾರಂಭದ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ಹರಿದುಬಂದಿದ್ದಾರೆ. ದೇವಸ್ಥಾನವನ್ನು ಹೂವುಗಳಿಂದ ಅಲಂಕರಿಸಲಾಗಿದ್ದು, ವಿಶೇಷ ಪೂಜೆಗಳನ್ನು ನಡೆಸಲಾಯಿತು. ಭಕ್ತರು ಪವಿತ್ರ ಸ್ನಾನ, ಕಲಶ ಸ್ನಾನಗಳನ್ನು ಕೈಗೊಂಡು ದೇವರ ದರ್ಶನ ಪಡೆದು ಹೊಸ ವರ್ಷವನ್ನು ಆಧ್ಯಾತ್ಮಿಕವಾಗಿ ಆರಂಭಿಸಿದರು.
ಮಂಗಳೂರು, ಜ.1: ಹೊಸ ವರ್ಷದ ಮೊದಲ ದಿನದಂದು ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ದಂಡು ಹರಿದುಬಂದಿದೆ. ಅದರಲ್ಲೂ ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ಸಾವಿರಾರು ಭಕ್ತರು ದೇವರ ದರ್ಶನಕ್ಕೆ ಆಗಮಿಸಿದ್ದಾರೆ. ಹೊಸ ವರ್ಷವನ್ನು ದೇವರ ಆಶೀರ್ವಾದದೊಂದಿಗೆ ಆರಂಭಿಸಬೇಕೆಂಬ ಸಂಕಲ್ಪದೊಂದಿಗೆ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ದೇವಸ್ಥಾನವನ್ನು ಸುಂದರ ಹೂವುಗಳಿಂದ ಅಲಂಕರಿಸಲಾಗಿದ್ದು, ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು. ಕೇವಲ ಮಂಗಳೂರಿನ ಭಕ್ತರು ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಭಕ್ತರು ಮತ್ತು ಪ್ರವಾಸಿಗರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಬೀಚ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ತಂಗಿ, ಹೊಸ ವರ್ಷದ ದಿನ ದೇವಾಲಯಗಳಿಗೆ ಭೇಟಿ ನೀಡಿದರು. ಕದ್ರಿ ದೇವಸ್ಥಾನದ ಮೇಲ್ಭಾಗದಲ್ಲಿರುವ ಏಳು ಕೆರೆಗಳಲ್ಲಿ ಪವಿತ್ರ ಸ್ನಾನ ಮಾಡಿ, ನಂತರ ಕಲಶ ಸ್ನಾನ ಕೈಗೊಂಡು ಭಕ್ತರು ದೇವರ ದರ್ಶನ ಪಡೆದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
