AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ರಮೇಶ್ ಬಿ. ಜವಳಗೇರಾ
|

Updated on: Dec 27, 2025 | 10:20 PM

Share

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಆದೇಶದಂತೆ, ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಗದಿತ ಸಮಯವನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು, ಡಿಸೆಂಬರ್ 27):  2025ಕ್ಕೆ ಗುಡ್​​ಬೈ ಹೇಳಿ 2026 ಅನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಜನ ಸಿದ್ಧರಾಗಿದ್ದಾರೆ. ಈ ಹೊಸ ವರ್ಷಾಚರಣೆಯ (New Year 2026) ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ (Seemant Kumar Singh) ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಆದೇಶದಂತೆ, ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಗದಿತ ಸಮಯವನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಎಣ್ಣೆ ಪ್ರಿಯರಿಗಾಗಿ ಹೊಸ ವರ್ಷ ಆಗಮನಕ್ಕಾಗಿ ಹಿಂದಿನ ದಿನ ಅಂದರೆ ಡಿಸೆಂಬರ್ 31ರ ಬೆಳಗ್ಗೆ ಸೂರ್ಯೋದಯ ಆಗುವ ಮುನ್ನವೇ ಬಾರ್​​​​​ಗಳು ಓಪನ್ ಆಗಿರುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ