ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಆದೇಶದಂತೆ, ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಗದಿತ ಸಮಯವನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು, ಡಿಸೆಂಬರ್ 27): 2025ಕ್ಕೆ ಗುಡ್ಬೈ ಹೇಳಿ 2026 ಅನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಜನ ಸಿದ್ಧರಾಗಿದ್ದಾರೆ. ಈ ಹೊಸ ವರ್ಷಾಚರಣೆಯ (New Year 2026) ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ (Seemant Kumar Singh) ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಆದೇಶದಂತೆ, ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಗದಿತ ಸಮಯವನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಎಣ್ಣೆ ಪ್ರಿಯರಿಗಾಗಿ ಹೊಸ ವರ್ಷ ಆಗಮನಕ್ಕಾಗಿ ಹಿಂದಿನ ದಿನ ಅಂದರೆ ಡಿಸೆಂಬರ್ 31ರ ಬೆಳಗ್ಗೆ ಸೂರ್ಯೋದಯ ಆಗುವ ಮುನ್ನವೇ ಬಾರ್ಗಳು ಓಪನ್ ಆಗಿರುತ್ತವೆ.
