New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ.
ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಕುಡಿದು ಅಸ್ವಸ್ಥರಾದವರಿಗೆ 15 ಸುರಕ್ಷತಾ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆಂಬುಲೆನ್ಸ್, ಅಗ್ನಿಶಾಮಕ ವಾಹನಗಳು ಹಾಗೂ ಡ್ರೋನ್ ಕ್ಯಾಮರಾಗಳ ಮೂಲಕ ನಿಗಾವಹಿಸಲಾಗುತ್ತದೆ. ಇದೇ ವೇಳೆ, ಕಲಬುರಗಿಯಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಹೊಸ ಮದ್ಯ ಮಾರಾಟ ಮಾರ್ಗಸೂಚಿಗಳಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

