ಹೊಸ ವರ್ಷ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬೆಂಗಳೂರಿನಾದ್ಯಂತ ಹೊಸ ವರ್ಷ 2026ರ ಆಚರಣೆಯ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ಭಕ್ತಸಾಗರ ಕಂಡುಬಂದಿದೆ. ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ ಅಭಿಷೇಕ ನೆರವೇರಿಸಲಾಯಿತು. ಉಳಿದಂತೆ ಗವಿ ಗಂಗಾಧರೇಶ್ವರ ದೇವಸ್ಥಾನ ಸೇರಿದಂತೆ ಹಲವು ದೇಗುಲಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು.
ಬೆಂಗಳೂರು, ಜನವರಿ 1: ಹೊಸ ವರ್ಷದ ಹಿನ್ನೆಲೆ ಬೆಂಗಳೂರು ನಗರಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪೂಜೆ ನೆರವೇರಿಸಲಾಗುತ್ತಿದೆ. ವರ್ಷದ ಮೊದಲ ದಿನವನ್ನು ಭಕ್ತಿಭಾವದಿಂದ ಆರಂಭಿಸಲು ಸಾವಿರಾರು ಭಕ್ತರು ಬೆಳಗ್ಗೆಯೇ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಹೊಸ ವರ್ಷದ ಪ್ರಯುಕ್ತ ವಿಶೇಷ ಅಭಿಷೇಕ, ಅಲಂಕಾರ ಮತ್ತು ಮಹಾ ಪೂಜೆಗಳನ್ನು ನೆರವೇರಿಸಲಾಗುತ್ತಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಭಕ್ತರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ ಅಭಿಷೇಕವನ್ನು ನೆರವೇರಿಸಿದ್ದಾರೆ.
