Nandi Hills: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಹೇರಿದ ಜಿಲ್ಲಾಡಳಿತ

| Updated By: ಆಯೇಷಾ ಬಾನು

Updated on: Dec 24, 2021 | 8:22 AM

ಡಿ.30ರ ಸಂಜೆ 6ರಿಂದ ಜ.2ರ ಬೆಳಗ್ಗೆ 6ರವರೆಗೂ ನಿಷೇಧ ಹೇರಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಚಿಕ್ಕಬಳ್ಳಾಪುರ: ಹೊಸ ವರ್ಷದ ದಿನದಂದು ಪ್ರಸಿದ್ದ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಬಂದು ಮೋಜು ಮಸ್ತಿ ಮಾಡಿ ಹರುಷದಿಂದ ಹೊಸ ವರ್ಷವನ್ನು ಬರ ಮಾಡಿಕೊಳ್ಳುತ್ತಿದ್ದ ಪ್ರವಾಸಿಗರು, ಯುವ ಪ್ರೇಮಿಗಳಿಗೆ ಜಿಲ್ಲಾಡಳಿತ ಶಾಕ್ ಕೊಟ್ಟಿದೆ. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆ ನಿಷೇಧಿಸಿ ಚಿಕ್ಕಬಳ್ಳಾಪುರ ಡಿಸಿ ಆದೇಶ ಹೊರಡಿಸಿದ್ದಾರೆ.

ಡಿ.30ರ ಸಂಜೆ 6ರಿಂದ ಜ.2ರ ಬೆಳಗ್ಗೆ 6ರವರೆಗೂ ನಿಷೇಧ ಹೇರಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. 2022ರ ಜನವರಿ 1 ರ ಹೊಸ ವರ್ಷದ ದಿನಾಚರಣೆಯ ಸಂಬಂಧವಾಗಿ, ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ನಂದಿ ಬೆಟ್ಟಕ್ಕೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ ಹಾಗೂ ಕೋವಿಡ್-19 ರೂಪಾಂತರಿ ಓಮಿಕ್ರಾನ್‌ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಡುವ ಹಿತದೃಷ್ಟಿಯಿಂದ ಡಿ.31 ರ ಮಧ್ಯರಾತ್ರಿ ಹಾಗೂ 2022ರ ಜನವರಿ 1 ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.