ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ

Edited By:

Updated on: Dec 31, 2025 | 1:43 PM

ಬೆಳಗಾವಿಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ ಬಿಗಿ ನಿಯಮಗಳನ್ನು ಜಾರಿಗೊಳಿಸಿದೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೋಟೆಲ್, ಬಾರ್ ಮಾಲೀಕರೊಂದಿಗೆ ಸಭೆ ನಡೆಸಿ, ಅಪ್ರಾಪ್ತರಿಗೆ ಮದ್ಯ ನೀಡಬಾರದೆಂದು ಸೂಚಿಸಿದ್ದಾರೆ. ಭದ್ರತೆಗಾಗಿ ನಗರದಲ್ಲಿ 1000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದ್ದು, ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ ಅವಘಡಗಳನ್ನು ತಪ್ಪಿಸಲು ಅಗತ್ಯ ಕ್ರಮವನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಆದೇಶಿಸಲಾಗಿದೆ. ನಗರದಲ್ಲಿ 1000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, KSRP, CAR ತುಕಡಿಗಳು ಮತ್ತು ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಮುಖ್ಯವಾಗಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಯಾವುದೇ ರೀತಿಯ ಕಿರುಕುಳ ನಡೆದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 31, 2025 01:40 PM