New Year Celebration: ಬೆಂಗಳೂರಲ್ಲಿ ಪಬ್ಗಳತ್ತ ಮುಖ ಮಾಡಿದ ಜನ; ಸಿಲಿಕಾನ್ ಸಿಟಿ ಫುಲ್ ಝಗಮಗ
ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಸಿದ್ಧವಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರ ಪ್ರದೇಶಗಳಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಅಪಾರ ಜನಸಂದಣಿ ನಿರೀಕ್ಷೆಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ, ಬಿಗಿ ಭದ್ರತೆ, ಸಿಸಿಟಿವಿ ಕಣ್ಗಾವಲು ಹಾಗೂ ಮಹಿಳಾ ಸುರಕ್ಷತೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು, ಡಿಸೆಂಬರ್ 31: ನಗರವು ಹೊಸ ವರ್ಷದ ಆಚರಣೆಗೆ ಸಿದ್ಧವಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ ಝಗಮಗಿಸುತ್ತಿವೆ. ಪಾರ್ಟಿಪ್ರಿಯರು ಹಾಗೂ ಯುವಜನತೆ ಈಗಾಗಲೇ ಪಬ್‌ಗಳು ಮತ್ತು ರಸ್ತೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ 6,000ಕ್ಕೂ ಹೆಚ್ಚು ಸಿಬ್ಬಂದಿ ಕಣ್ಗಾವಲಿರಲಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
