AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ

ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ

ಝಾಹಿರ್ ಯೂಸುಫ್
|

Updated on: Dec 22, 2025 | 11:13 AM

Share

New Zealand vs West Indies: 155 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡವು 2 ವಿಕೆಟ್ ಕಳೆದುಕೊಂಡು 306 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು. ಮೊದಲ ಇನಿಂಗ್ಸ್​ನಲ್ಲಿನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 462 ರನ್​ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡವು ಕೇವಲ 138 ರನ್​ಗಳಿಗೆ ಆಲೌಟ್ ಆಗಿದೆ. 

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ನ್ಯೂಝಿಲೆಂಡ್ ತಂಡ ಅಮೋಘ ಜಯ ಸಾಧಿಸಿದೆ. ಮೌಂಟ್​ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 8 ವಿಕೆಟ್ ನಷ್ಟಕ್ಕೆ ಬರೋಬ್ಬರಿ 575 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ವೆಸ್ಟ್ ಇಂಡೀಸ್ ತಂಡವು 420 ರನ್​ಗಳಿಸಿ ಆಲೌಟ್ ಆಯಿತು.

155 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡವು 2 ವಿಕೆಟ್ ಕಳೆದುಕೊಂಡು 306 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು. ಮೊದಲ ಇನಿಂಗ್ಸ್​ನಲ್ಲಿನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 462 ರನ್​ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡವು ಕೇವಲ 138 ರನ್​ಗಳಿಗೆ ಆಲೌಟ್ ಆಗಿದೆ.

ಈ ಮೂಲಕ ನ್ಯೂಝಿಲೆಂಡ್ ತಂಡವು ಬರೋಬ್ಬರಿ 323 ರನ್​ಗಳ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ) , ಡೆವೊನ್ ಕಾನ್ವೆ,  ಕೇನ್ ವಿಲಿಯಮ್ಸನ್ , ರಚಿನ್ ರವೀಂದ್ರ ,
ಡೇರಿಲ್ ಮಿಚೆಲ್ , ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ಝಕಾರಿ ಫೌಲ್ಕ್ಸ್ , ಅಜಾಝ್ ಪಟೇಲ್ , ಜೇಕಬ್ ಡಫಿ ,
ಮೈಕೆಲ್ ರೇ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಜಾನ್ ಕ್ಯಾಂಪ್ಬೆಲ್ , ಬ್ರಾಂಡನ್ ಕಿಂಗ್ , ಕವೆಮ್ ಹಾಡ್ಜ್ , ಶೈ ಹೋಪ್ , ಅಲಿಕ್ ಅಥನಾಝ್ ,
ರೋಸ್ಟನ್ ಚೇಸ್ (ನಾಯಕ) , ಜಸ್ಟಿನ್ ಗ್ರೀವ್ಸ್ , ಟೆವಿನ್ ಇಮ್ಲಾಚ್ (ವಿಕೆಟ್ ಕೀಪರ್) , ಕೆಮರ್ ರೋಚ್ , ಜೇಡೆನ್ ಸೀಲ್ಸ್ , ಆಂಡರ್ಸನ್ ಫಿಲಿಪ್.