ಸ್ಪ್ರಿಂಗ್ ಇದೆಯಾ? ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು
India vs New Zealand, 3rd T20I: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್ಗಳಲ್ಲಿ ಚೇಸ್ ಮಾಡಿ ಹೊಸ ಇತಿಹಾಸವನ್ನು ನಿರ್ಮಿಸಿದೆ.
ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅರ್ಧಶತಕದ ಬಳಿಕ ಕೂಡ ಕಿವೀಸ್ ಬೌಲರ್ಗಳ ಬೆಂಡೆತ್ತಿದ ಯುವ ದಾಂಡಿಗ 20 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು.
ಈ ಮೂಲಕ ಟೀಮ್ ಇಂಡಿಯಾ ಕೇವಲ 10 ಓವರ್ಗಳಲ್ಲಿ 155 ರನ್ ಸಿಡಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ನ್ಯೂಝಿಲೆಂಡ್ ಆಟಗಾರರಾದ ಮಿಚೆಲ್ ಸ್ಯಾಂಟ್ನರ್, ಡೆವೊನ್ ಕಾನ್ವೆ ಹಾಗೂ ಜೇಕಬ್ ಡಫಿ ಅಭಿಷೇಕ್ ಶರ್ಮಾ ಅವರ ಬ್ಯಾಟ್ ಅನ್ನು ಪರಿಶೀಲಿಸುತ್ತಿರುವುದು ಕಂಡು ಬಂತು.
ಅಭಿಷೇಕ್ ಶರ್ಮಾ ಅವರ ಆರ್ಭಟವನ್ನು ಕಣ್ತುಂಬಿಕೊಂಡಿದ್ದ ಕಿವೀಸ್ ಆಟಗಾರರು ಇದೇನು ಬ್ಯಾಟಾ? ಅಥವಾ ಬ್ಯಾಟ್ನಲ್ಲಿ ಸ್ಪ್ರಿಂಗ್ ಏನಾದ್ರೂ ಇಟ್ಟಿದೆಯಾ ಎಂಬಾರ್ಥದಲ್ಲಿ ಟೀಮ್ ಇಂಡಿಯಾ ದಾಂಡಿಗನ ಕಾಲೆಳೆಯುತ್ತಿರುವುದು ಕಂಡು ಬಂತು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್ಗಳಲ್ಲಿ ಚೇಸ್ ಮಾಡಿ ಹೊಸ ಇತಿಹಾಸವನ್ನು ನಿರ್ಮಿಸಿದೆ.