ಆಸ್ಟ್ರೇಲಿಯನ್ನರ ಅಬ್ಬರಕ್ಕೆ ತತ್ತರಿಸಿದ ನ್ಯೂಝಿಲೆಂಡ್

Updated on: Oct 02, 2025 | 7:20 AM

New Zealand vs Australia: 182 ರನ್​ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಮಾರ್ಷ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 43 ಎಸೆತಗಳನ್ನು ಎದುರಿಸಿದ ಮಾರ್ಷ್ 5 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 85 ರನ್ ಸಿಡಿಸಿದರು. ಇನ್ನು ಟ್ರಾವಿಸ್ ಹೆಡ್ 18 ಎಸೆತಗಳಲ್ಲಿ 31 ರನ್ ಬಾರಿಸಿದರು.

ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ ಆತಿಥೇಯ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಪರ ಟಿಮ್ ರಾಬಿನ್ಸನ್ 66 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 106 ರನ್ ಬಾರಿಸಿದ್ದರು. ಈ ಶತಕದ ನೆರವಿನೊಂದಿಗೆ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು.

182 ರನ್​ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಮಾರ್ಷ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 43 ಎಸೆತಗಳನ್ನು ಎದುರಿಸಿದ ಮಾರ್ಷ್ 5 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 85 ರನ್ ಸಿಡಿಸಿದರು. ಇನ್ನು ಟ್ರಾವಿಸ್ ಹೆಡ್ 18 ಎಸೆತಗಳಲ್ಲಿ 31 ರನ್ ಬಾರಿಸಿದರು.

ಆ ಬಳಿಕ ಬಂದ ಮ್ಯಾಥ್ಯೂ ಶಾರ್ಟ್ 18 ಎಸೆತಗಳಲ್ಲಿ 29 ರನ್​ಗಳ ಕೊಡುಗೆ ನೀಡಿದರು. ಇನ್ನು ಟಿಮ್ ಡೇವಿಡ್ ಕೇವಲ 12 ಎಸೆತಗಳಲ್ಲಿ 21 ರನ್ ಬಾರಿಸುವ ಮೂಲಕ 16.3 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.