NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
New Zealand vs South Africa, 1st T20I: 35 ರನ್ಗಳಿಸುವಷ್ಟರಲ್ಲಿ ನ್ಯೂಝಿಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೇಮ್ಸ್ ನೀಶಮ್ 26 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ಆದರೆ ಅತ್ತ ಅದಾಗಲೇ ಪಂದ್ಯದ ಮೇಲೆ ಹಿಡಿತ ಹೊಂದಿದ್ದ ಸೌತ್ ಆಫ್ರಿಕಾ ಬೌಲರ್ಗಳು ಕೆಳ ಕ್ರಮಾಂಕದ ಬ್ಯಾಟರ್ಗಳನ್ನು ಬೇಗನೆ ಪೆವಿಲಿಯನ್ಗಟ್ಟಿದರು.
ಟಿ20 ವಿಶ್ವಕಪ್ನ ರನ್ನರ್ ಅಪ್ ನ್ಯೂಝಿಲೆಂಡ್ ತಂಡ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದೆ. ಮೌಂಟ್ ಮೌಂಗನುಯಿನ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕಿವೀಸ್ ಪಡೆಗೆ ಆರಂಭಿಕ ಆಘಾತ ನೀಡುವಲ್ಲಿ ಸೌತ್ ಆಫ್ರಿಕಾ ಬೌಲರ್ಗಳು ಯಶಸ್ವಿಯಾಗಿದ್ದರು.
ಪರಿಣಾಮ 35 ರನ್ಗಳಿಸುವಷ್ಟರಲ್ಲಿ ನ್ಯೂಝಿಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೇಮ್ಸ್ ನೀಶಮ್ 26 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ಆದರೆ ಅತ್ತ ಅದಾಗಲೇ ಪಂದ್ಯದ ಮೇಲೆ ಹಿಡಿತ ಹೊಂದಿದ್ದ ಸೌತ್ ಆಫ್ರಿಕಾ ಬೌಲರ್ಗಳು ಕೆಳ ಕ್ರಮಾಂಕದ ಬ್ಯಾಟರ್ಗಳನ್ನು ಬೇಗನೆ ಪೆವಿಲಿಯನ್ಗಟ್ಟಿದರು.
ಈ ಮೂಲಕ ನ್ಯೂಝಿಲೆಂಡ್ ತಂಡವನ್ನು 14.3 ಓವರ್ಗಳಲ್ಲಿ 91 ರನ್ಗಳಿಗೆ ಆಲೌಟ್ ಮಾಡಿದರು. ಸೌತ್ ಆಫ್ರಿಕಾ ನ್ಕೊಬಾನಿ ಮೊಕೊಯೆನಾ 3.3 ಓವರ್ಗಳಲ್ಲಿ 26 ರನ್ ನೀಡಿ 3 ವಿಕೆಟ್ ಪಡೆದರೆ, ಜೆರಾಲ್ಡ್ ಕೋಟ್ಝಿ 2 ವಿಕೆಟ್ ಕಬಳಿಸಿದರು. ಇನ್ನು ಕೇಶವ್ ಮಹಾರಾಜ್ ಹಾಗೂ ಒರ್ಟ್ನಿಲ್ ಬಾರ್ಟ್ಮನ್ ತಲಾ ಎರಡು ವಿಕೆಟ್ ಕಬಳಿಸಿ ಉತ್ತಮ ಸಾಥ್ ನೀಡಿದರು.
ಇನ್ನು ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 16.4 ಓವರ್ಗಳಲ್ಲಿ 93 ರನ್ ಗಳಿಸುವ ಮೂಲಕ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.
