Karnataka Assembly Session: ಭಗವಂತನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ

Karnataka Assembly Session: ಭಗವಂತನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ

ಅರುಣ್​ ಕುಮಾರ್​ ಬೆಳ್ಳಿ
|

Updated on:Dec 09, 2024 | 1:08 PM

ಅನ್ನಪೂರ್ಣ ಅವರೊಂದಿಗೆ ವಿಧಾನ ಸಭೆಗೆ ಆಯ್ಕೆಯಾಗಿರುವ ಸಿಪಿ ಯೋಗೇಶ್ವರ್ ಮತ್ತು ಯಾಸಿರ್ ಅಹ್ಮದ್ ಖಾನ್ ಪಠಾಣ್ ಸಹ ಪ್ರಮಾಣ ವಚನ ಸ್ವೀಕರಿಸಿದರು. ಯೋಗೇಶ್ವರ್ ಭಗವಂತನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಪಠಾಣ್ ತಂದೆ ತಾಯಿಗಳ ಹೆಸರಲ್ಲಿ ಪ್ರಮಾಣ ಮಾಡಿದರು.

ಬೆಳಗಾವಿ: ನಗರದ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ವಿಧಾನ ಸಭೆಗೆ ಆಯ್ಕೆಯಾಗಿರುವ ಮೂವರು ಶಾಸಕರು ಇಂದು ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪತಿ ಸಂಸತ್ತಿಗೆ ಆಯ್ಕೆಯಾಗಿರುವುದರಿಂದ ಸಂಡೂರು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿರುವ ಅನ್ನಪೂರ್ಣ ತುಕಾರಾಂ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಮೊದಲು ಅವರು ವಿಧಾನಸಭಾ ಪ್ರಾಂಗಣದಲ್ಲಿ ತಮ್ಮ ಪತಿಯೊಂದಿಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪಾದಗಳಿಗೆ ನಮಸ್ಕರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ ತುಕಾರಾಂ ಸ್ಪರ್ಧಿಸಬೇಕೆಂದು ಜನ ತೀರ್ಮಾನಿಸಿದ್ದಾರೆ: ಶಿವಕುಮಾರ್

Published on: Dec 09, 2024 01:08 PM