ಅರಮನೆ ಮೈದಾನದಲ್ಲಿ ರಿಸೆಪ್ಷನ್: ಶ್ರೀಲಂಕಾ ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಬೆಂಗಳೂರಿನ (Bengaluru) ಪ್ಯಾಲೆಸ್ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ಮನೆಗೆ ವಾಪಸ್ಸಾಗಿದ್ದು, ಬಳಿಕ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ (Ramamurthy Nagar) ಈ ಘಟನೆ ನಡೆದಿದ್ದು, 26 ವರ್ಷದ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು, ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಆದ್ರೆ, ಅಲ್ಲಿ ಅದೇನಾಯ್ತೋ ಏನೋ ಅರ್ಧಕ್ಕೆ ಶ್ರೀಲಂಕಾದಿಂದ ಇಬ್ಬರು ವಾಪಸ್ಸಾಗಿದ್ದರು. ಬಳಿಕ ನೇಣಿಗೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು, (ಡಿಸೆಂಬರ್ 26): ಬೆಂಗಳೂರಿನ (Bengaluru) ಪ್ಯಾಲೆಸ್ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ಮನೆಗೆ ವಾಪಸ್ಸಾಗಿದ್ದು, ಬಳಿಕ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ (Ramamurthy Nagar) ಈ ಘಟನೆ ನಡೆದಿದ್ದು, 26 ವರ್ಷದ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು, ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಆದ್ರೆ, ಅಲ್ಲಿ ಅದೇನಾಯ್ತೋ ಏನೋ ಅರ್ಧಕ್ಕೆ ಶ್ರೀಲಂಕಾದಿಂದ ಇಬ್ಬರು ವಾಪಸ್ಸಾಗಿದ್ದರು. ಬಳಿಕ ನೇಣಿಗೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಇನ್ನು ಈ ಬಗ್ಗೆ ಮೃತ ಗಾನವಿ ದೊಡ್ಡಮ್ಮ ಮಾತನಾಡಿದ್ದು, ಗಾನವಿ ಗಂಡ ಸೂರಜ್ ಗಂಡಸ್ತನದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹನಿಮೂನ್‌ಗೆಂದು ಶ್ರೀಲಂಕಾಕ್ಕೆ ಹೋಗಿದ್ದರು. ಆದ್ರೆ, ಅಲ್ಲಿ ಹೆಂಡ್ತಿನ ಟಚ್ ಸಹ ಮಾಡಿಲ್ಲ. ನಪುಂಸಕ ಮಗನಿಗೆ ಮದುವೆ ಯಾಕೆ ಮಾಡಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

