ನಮ್ಮ ಸಿಎಂ ಪ್ರಿಯಾಂಕ್ ಖರ್ಗೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್
ನಮ್ಮ ಸಿಎಂ ಪ್ರಿಯಾಂಕ್ ಖರ್ಗೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕಲಬುರಗಿ: ನಮ್ಮ ಸಿಎಂ ಪ್ರಿಯಾಂಕ್ ಖರ್ಗೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ತಾರಪುರ ವಿಧಾನಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಪ್ರಿಯಾಂಕ್ ಖರ್ಗೆಯವರಿಗೆ ಮುಖ್ಯಮಂತ್ರಿ ಮಾಡಬೇಕೆಂದು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿ ಮಾಡುತ್ತಿದ್ದಾರೆ. ಅಪ್ಪನ ಕನಸಲ್ಲೆ ಕೋಟ್ಯಂತರ ಕನ್ನಡಿಗರ ಕನಸು, ಅನ್ನೋ ಪೋಸ್ಟರ್ಗಳು ವೈರಲ್ ಆಗುತ್ತಿವೆ. ಮತ್ತೊಂದಡೆ ಟ್ವೀಟರ್ನಲ್ಲಿ ಕೂಡ ನಮ್ಮ ಸಿಎಂ ಪ್ರಿಯಾಂಕ್ ಖರ್ಗೆ ಎಂದು ಬೆಂಬಲಿಗರು ಟ್ರೆಂಡ್ ಹುಟ್ಟು ಹಾಕುತ್ತಿದ್ದಾರೆ.