ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!

Updated on: Feb 09, 2025 | 2:36 PM

ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹುದ್ದೆ ಸಂಬಂಧ ಬಣಬಡಿದಾಟ ನಡೆದಿದೆ. ಬಿವೈ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಮಧ್ಯ ಬಹಿರಂಗ ಕಿತ್ತಾಟ ನಡೆಯುತ್ತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್​ನಲ್ಲಿ ಸಿಎಂ ಕುರ್ಚಿಗಾಗಿ ಮುಸುಕಿನ ಗುದ್ದಾಟ ಶುರುವಾಗಿದೆ. ಡಿಕೆ ಶಿವಕುಮಾರ್ ಬಣ ಹಾಗೂ ಸಿದ್ದರಾಮಯ್ಯ ಬಣದ ನಾಯಕರು ಪರೋಕ್ಷವಾಗಿ ಸಿಎಂ ಹುದ್ದೆ ಬಗ್ಗೆ ಕಿತ್ತಾಡುತ್ತಿದ್ದಾರೆ. ಇದರ ಮಧ್ಯೆ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಎಲ್ಲರ ಗಮನಸೆಳೆದಿದ್ದಾರೆ.

ದಾವಣಗೆರೆ, ಫೆಬ್ರವರಿ 09): ಕರ್ನಾಟಕ ಕಾಂಗ್ರೆಸ್ ಮನೆ ಬೂದಿ ಮುಚ್ಚಿದ ಕೆಂಡದಂತಿದ್ದು, ಪಟ್ಟದ ಆಟ ಮುಂದುವರೆದಿದೆ. ಸಿಎಂ ರೇಸ್‌ನಲ್ಲಿ ಇರುವವರ ಬೆಂಬಲಿಗರು ಅಲ್ಲಲ್ಲಿ ಮುಂದಿನ ಸಿಎಂ ಕೂಗೆಬ್ಬಿಸುತ್ತಿದ್ದಾರೆ. ಈ ಕೂಗು ಇದೀಗ ವಾಲ್ಮೀಕಿ ಜಾತ್ರೆಗೂ ವ್ಯಾಪಿಸಿದೆ. ಹೌದು…. ದಾವಣಗೆರೆಯ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ವ್ಯಕ್ತಿಯೋರ್ವ, ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಪ್ರಿಂಟೆಡ್ ಟಿ ಶರ್ಟ್ ಹಾಕಿಕೊಂಡು ಬಂದಿದ್ದಾನೆ. ಅಲ್ಲದೇ ಕೆಲವರು ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಪೋಸ್ಟರ್ ಹಿಡಿದು ಜಾತ್ರೆಗೆ ಆಗಮಿಸಿ ಎಲ್ಲರ ಗಮನಸೆಳೆದಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More