ಸತೀಶ್ ಜಾರಕಿಹೊಳಿಗೆ ಕೊನೆಗೂ ಬಂತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್!

Updated on: May 29, 2026 | 10:36 AM

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈ ಕಮಾಂಡ್ ಸತೀಶ್ ಜಾರಕಿಹೊಳಿ ಅವರಿಗೆ ಆಫರ್ ನೀಡಿದೆ. ಕೆಸಿ ವೇಣುಗೋಪಾಲ್ ಅವರು ಜಾರಕಿಹೊಳಿಯವರಿಗೆ ಕರೆ ಮಾಡಿ ಈ ಪ್ರಸ್ತಾಪ ಮಾಡಿದ್ದಾರೆ. ಆದರೆ, ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನವನ್ನೂ ನೀಡಬೇಕೆಂಬ ಷರತ್ತು ವಿಧಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು, ಮೇ 29: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈ ಕಮಾಂಡ್ ನಾಯಕರು ಸತೀಶ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ ಎಂಬುದು ತಿಳಿದುಬಂದಿದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸತೀಶ್ ಜಾರಕಿಹೊಳಿಗೆ ಕರೆ ಮಾಡಿ ಪ್ರಸ್ತಾಪ ಮಾಡಿದ್ದಾರೆ. ಆದರೆ, ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳಲು ಒಂದು ಪ್ರಮುಖ ಷರತ್ತು ವಿಧಿಸಿದ್ದಾರೆ. ಅವರು ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಲು ಇಚ್ಛಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ, ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಹುದ್ದೆಗೆ ಮತ್ತು ಸತೀಶ್ ಜಾರಕಿಹೊಳಿ ಅವರ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ದಾರಿ ಸುಗಮವಾಗಿದೆ ಎಂದು ವರದಿಯಾಗಿದೆ. ಜಾರಕಿಹೊಳಿ ಅವರು ಕಳೆದ ಒಂದು ವರ್ಷದಿಂದಲೂ ಇದೇ ನಿರೀಕ್ಷೆಯಲ್ಲಿದ್ದರು. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೆ ಮಾತ್ರ ತಾನು ಕೆಪಿಸಿಸಿ ಅಧ್ಯಕ್ಷನಾಗುವುದಾಗಿ ಅವರು ತಿಳಿಸಿದ್ದರು. ಕೇವಲ ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಿಲ್ಲದೆ ಕೆಲಸ ಮಾಡುವುದು ಕಷ್ಟಕರ ಎಂದು ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹೈ ಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More