AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ: ಚಿಕ್ಕಬಳ್ಳಾಪುರದಲ್ಲಿ ಜೆಸಿಬಿ ಗರ್ಜನೆ

ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ: ಚಿಕ್ಕಬಳ್ಳಾಪುರದಲ್ಲಿ ಜೆಸಿಬಿ ಗರ್ಜನೆ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 23, 2026 | 4:27 PM

Share

ಚಿಕ್ಕಬಳ್ಳಾಪುರ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 69 ರ ಎರಡು ಬದಿಗಳಲ್ಲಿನ ವಾಣಿಜ್ಯ ಕಟ್ಟಡಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು NHAI ಕೈಗೊಂಡಿದೆ. ಎಇಇ ರಾಜಾರೆಡ್ಡಿ ನೇತೃತ್ವದಲ್ಲಿ, ಭಾರೀ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜೆಸಿಬಿಗಳು ಕಾರ್ಯನಿರ್ವಹಿಸುತ್ತಿವೆ. ಮಾಲೀಕರು ಕಾಲಾವಕಾಶ ಕೇಳುತ್ತಿದ್ದರೂ, NHAI ಈಗಾಗಲೇ ಸಾಕಷ್ಟು ನೋಟಿಸ್‌ಗಳನ್ನು ನೀಡಿರುವುದಾಗಿ ಸ್ಪಷ್ಟಪಡಿಸಿದೆ.

ಚಿಕ್ಕಬಳ್ಳಾಪುರ, ಸೆ.23: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 69 ರ ಬದಿಯಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಆರಂಭಿಸಿದೆ. ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಣಿಜ್ಯ ಕಟ್ಟಡಗಳು ಒತ್ತುವರಿ ಮಾಡಿಕೊಂಡಿದ್ದವು. ಕಳೆದ ಒಂದು ವರ್ಷದಿಂದ ನೋಟಿಸ್‌ಗಳನ್ನು ನೀಡಿದರೂ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸದ ಹಿನ್ನೆಲೆಯಲ್ಲಿ NHAI ಅಧಿಕಾರಿಗಳು ಈಗ ರಸ್ತೆಗೆ ಇಳಿದಿದ್ದಾರೆ. NHAI ಎಇಇ ರಾಜಾರೆಡ್ಡಿ ನೇತೃತ್ವದಲ್ಲಿ, ಭಾರೀ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜೆಸಿಬಿ ಮತ್ತು ಹಿಟಾಚಿ ಯಂತ್ರಗಳನ್ನು ಬಳಸಿ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಹೆದ್ದಾರಿ ಪ್ರಾಧಿಕಾರದ ಪ್ರಕಾರ, ಈ ರಸ್ತೆಯು ಮಧ್ಯಭಾಗದಿಂದ ಪ್ರತಿ ಬದಿಗೆ 40 ಅಡಿಗಳಂತೆ ಒಟ್ಟು 80 ಅಡಿ ಅಗಲವನ್ನು ಹೊಂದಿರಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ರಸ್ತೆ ಅಗಲೀಕರಣಕ್ಕೆ ಇದು ಅಗತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೆರವು ಕಾರ್ಯಾಚರಣೆಯನ್ನು ಮುಗಿಸಿ, ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 23, 2026 03:38 PM

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More