NIA Raid on PFI, SDPI: ದೇಶಾದ್ಯಂತ SDPI, PFI ನಾಯಕರ ಮನೆ ಕಚೇರಿ ಮೇಲೆ NIA ದಾಳಿ
ಇಡೀ ದೇಶಾದ್ಯಂತ ಎನ್ಐಎ ಅಧಿಕಾರಿಗಳು SDPI, PFI ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಅಬೂಬಕರ್ ಕುಳಾಯಿ ಸೋದರನ ಮನೆ ಮೇಲೂ ದಾಳಿ ನಡೆದಿದೆ.
ರಾಷ್ಟ್ರೀಯ ತನಿಖಾ ದಳವು (National Investigation Agency – NIA) ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿ (Popular Front of India – PFI) ಮೇಲೆ ಗುರುವಾರ ನಸುಕಿನ 3.30ರ ವೇಳೆಯಲ್ಲಿ ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಇದೀಗ ಕಚೇರಿಗೆ ಪ್ರವೇಶಿಸಿದ್ದಾರೆ. ದಾಳಿಯ ನಿಖರ ಕಾರಣ ತಿಳಿದುಬಂದಿಲ್ಲ. ಕೇರಳ, ಉತ್ತರ ಪ್ರದೇಶ, ಆಂಧ್ರ ಪ್ರದೇಶ ಸೇರಿದಂತೆ ದೇಶದ ವಿವಿಧೆಡೆ ಇರುವ ಎಸ್ಡಿಪಿಐ ಕಚೇರಿಗಳ (Social Democratic Party of India – SDPI) ಮೇಲೆಯೂ ದಾಳಿ ನಡೆದಿದೆ.
ಸದ್ಯದ ಮಾಹಿತಿ ಪ್ರಕಾರ 10 ರಾಜ್ಯಗಳಲ್ಲಿ NIA ಹಾಗೂ ED ಏಕಕಾಲದಲ್ಲಿ ದಾಳಿ ನಡೆಸಿದ್ದು 100ಕ್ಕೂ ಹೆಚ್ಚು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. NIA, ED, ಸ್ಥಳೀಯ ಪೊಲೀಸರಿಂದ ಕಾರ್ಯಾಚರಣೆ ನಡೆದಿದ್ದು ಕೇರಳ, ತಮಿಳುನಾಡಿನ ಅತೀ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆದಿದೆ.
Published on: Sep 22, 2022 08:11 AM
Latest Videos