AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಘೋಷಣೆಯ ಬಳಿಕ ಬೇರೆಯಾಗಿದೆ ನಿಖಿಲ್ ಖದರು

ಚನ್ನಪಟ್ಟಣಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಘೋಷಣೆಯ ಬಳಿಕ ಬೇರೆಯಾಗಿದೆ ನಿಖಿಲ್ ಖದರು

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 26, 2024 | 6:21 PM

Share

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರ ನಿಖಿಲ್ ಕುಮಾರಸ್ವಾಮಿಯ ಖದರು ಬೇರೆಯಾಗಿದೆ. ಚುನಾವಣಾ ರಾಜಕೀಯದಲ್ಲಿ ಅವರ ಸಾಧನೆಯೇನೂ ಇಲ್ಲ ಅದರೆ ಚನ್ನಪಟ್ಟಣ ಕ್ಷೇತ್ರದ ಚುನಾವಣೆ ಹೈವೋಲ್ಟೇಜ್ ಮತ್ತು ಪ್ರತಿಷ್ಠೆಯ ಕಾಳಗವಾಗಿರುವುದರಿಂದ ಜನ ನಿಖಿಲ್ ರನ್ನು ನೋಡುವ ದೃಷ್ಟಿಕೋನ ಬದಲಾಗಿದೆ.

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಇದುವರೆಗೆ ಎರಡು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದು ಜೆಡಿಎಸ್ ಅಭ್ಯರ್ಥಿಯಾಗಿ. ಚನ್ನಪಟ್ಟಣದ ಉಪ ಚುನಾವಣೆಯಲ್ಲೂ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದರೂ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಎನ್​ಡಿಎ ಅಭ್ಯರ್ಥಿಯೆಂದು ಬಿಂಬಿಸಲಾಗುತ್ತಿದೆ. ಹಾಗಾಗಿ ಇವತ್ತು ಅವರು ನಗರದ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದಾಗ ಭರ್ಜರಿ ಸ್ವಾಗತ ಸಿಕ್ಕಿತು. ಹಿರಿಯ ಅಥವಾ ಪ್ರಮುಖ ನಾಯಕರಾರೂ ಕಾಣುತ್ತಿಲ್ಲವಾದರೂ ಕಚೇರಿಯಲ್ಲಿದ್ದವರು ನಿಖಿಲ್​ಗೆ ಶಾಲು ಹೊದೆಸಿ ಬರಮಾಡಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚನ್ನಪಟ್ಟಣ ಉಪಚುನಾವಣೆ: ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More