ದೇವೇಗೌಡರ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರಿಗೆ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ ದಂಪತಿ
ಅಸಲಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹುಟ್ಟೂರಿಗೆ ಭೇಟಿ ನೀಡಿ ದೇವಸ್ಥಾನದಲ್ಲ್ಲಿ ಪೂಜೆ ಸಲ್ಲಿಸುವುದು ಪತ್ನಿ ರೇವತಿಯವರ ಇಚ್ಛೆಯಾಗಿತ್ತು ಎಂದು ಪೂಜೆ ಸಲ್ಲಿಸಿದ ಬಳಿಕ ನಿಖಿಲ್ ಹೇಳಿದರು. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ ಸ್ಪರ್ಧಿಸಿದ್ದಾರೆ.
ಹಾಸನ: ಉಪ ಚುನಾವಣೆಗಳ ಫಲಿತಾಂಶಕ್ಕೆ ಕೇವಲ 5 ದಿನ ಮಾತ್ರ ಬಾಕಿಯಿದೆ. ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ತಮ್ಮ ಪತ್ನಿ ರೇವತಿ ಹಾಗೂ ಮಗನೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇವತ್ತು ಅವರು ತಮ್ಮ ತಾತನ ಹುಟ್ಟೂರು ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿರುವ ಮನೆದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಿದರು. ನಿಖಿಲ್ ಕಾರಲ್ಲಿ ಅಗಮಿಸಿದ ಕೂಡಲೇ ಗ್ರಾಮಸ್ಥರು ಅವರನ್ನು ಸ್ವಾಗತಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದಾಖಲೆಯ ಮತದಾನವಾಗಿರುವುದು ನನ್ನ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ: ನಿಖಿಲ್ ಕುಮಾರಸ್ವಾಮಿ
Latest Videos