Hasanamba Temple: ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ನಟ ನಿಖಿಲ್ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 14, 2023 | 9:15 PM

ಹಾಸನಾಂಬೆ ದೇಗುಲ(Hasanamba Temple)ಕ್ಕೆ ಇಂದು(ನ.14) ನಟ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಿ ದೇವಿಯ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ‘ಪ್ರತಿ ವರ್ಷ ಹಾಸನಾಂಬೆ ‌ದರ್ಶನ 9 ರಿಂದ 15 ದಿನ ಸಿಗುತ್ತದೆ. ಈ ಬಾರಿ ಪ್ರತಿ ದಿನ ದಿನಕ್ಕೆ ಒಂದರಿಂದ ಒಂದೂವರೆ ಲಕ್ಷ ಭಕ್ತರು ದರ್ಶನ ಪಡೆದಿದ್ದಾರೆ ಎಂದರು.

ಹಾಸನ, ನ.14: ಹಾಸನಾಂಬೆ ದೇಗುಲ(Hasanamba Temple)ಕ್ಕೆ ಇಂದು(ನ.14) ನಟ ನಿಖಿಲ್ ಕುಮಾರಸ್ವಾಮಿ(Nikil Kumaraswamy) ಅವರು ಆಗಮಿಸಿ ದೇವಿಯ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ‘ಪ್ರತಿ ವರ್ಷ ಹಾಸನಾಂಬೆ ‌ದರ್ಶನ 9 ರಿಂದ 15 ದಿನ ಸಿಗುತ್ತದೆ. ಈ ಬಾರಿ ಪ್ರತಿ ದಿನ ದಿನಕ್ಕೆ ಒಂದರಿಂದ ಒಂದೂವರೆ ಲಕ್ಷ ಭಕ್ತರು ದರ್ಶನ ಪಡೆದಿದ್ದಾರೆ. ಶಾಸಕರು ಜಿಲ್ಲಾಡಳಿತ ಜವಾಬ್ದಾರಿಯಿಂದ ವ್ಯವಸ್ಥೆ ‌ಮಾಡಿದ್ದು, ರಾಜ್ಯದಲ್ಲೇ ಹಾಸನಾಂಬೆ ‌ತಾಯಿಯ ಶಕ್ತಿ ಬಗ್ಗೆ ಚರ್ಚೆ ಆಗುತ್ತಿತ್ತು. ಹಚ್ಚಿದ ದೀಪ‌ ಒಂದು ವರ್ಷದವರೆಗೆ ಇರುತ್ತದೆ ಎಂಬ ನಂಬಿಕೆ ಇದೆ. ಎಲ್ಲರಿಗೂ ಒಳ್ಳೆಯದಾಗಲಿ, ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ರೈತರ ಪರವಾಗಿ ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಬೇಡಿದ್ದೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ