ಜೆಡಿಎಸ್​​ ರಾಜ್ಯಾಧ್ಯಕ್ಷರ ಬದಲಾವಣೆ: ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅಧಿಕೃತ ಘೋಷಣೆ

Updated on: Nov 20, 2025 | 7:21 PM

ಜೆಡಿಎಸ್‌ ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ . ಅದರಂತೆ ನಾಳೆ (ನವೆಂಬರ್ 21) ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲೇ ಜೆಡಿಎಸ್​​ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಹೆಸರು​ ಘೋಷಣೆ ಮಾಡುವ ಸಾಧ್ಯತೆಗಳಿವೆ.

ಬೆಂಗಳೂರು, (ನವೆಂಬರ್ 20): ಜೆಡಿಎಸ್‌ ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ . ಅದರಂತೆ ನಾಳೆ (ನವೆಂಬರ್ 21) ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲೇ ಜೆಡಿಎಸ್​​ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಹೆಸರು​ ಘೋಷಣೆ ಮಾಡುವ ಸಾಧ್ಯತೆಗಳಿವೆ. ಹೌದು…ಸದ್ಯ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಎಚ್​​ಡಿ ಕುಮಾರಸ್ವಾಮಿ ಅವರು ರಾಷ್ಟ್ರರಾಜಕಾರಣದ್ದಾರೆ. ಜೊತೆ ಅವರಿಗೆ ಆಗಾಗ ಆರೋಗ್ಯ ಕೈಕೊಡುತ್ತಿದೆ. ಹೀಗಾಗಿ ಯುವಕ ಘಟಕದ ರಾಜ್ಯಾಧ್ಯಕ್ಷರಾಗಿರುವ ಪುತ್ರ ನಿಖಿಲ್​​ಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ತೀರ್ಮಾನಿಸಿದ್ದು, ನಾಳೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಂಡು ರಜತ ಮಹೋತ್ಸವ ಕಾರ್ಯಕ್ರಮ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More