ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ನಿಖಿಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ಟಿಕೆಟ್ಗಾಗಿ ದೋಸ್ತಿಗಳಾದ ಜೆಡಿಎಸ್ -ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿದೆ. ಒಂದು ಕಡೆ ತಮಗೆ ಟಿಕಟ್ ಬೇಕೆಂದು ಸಿಪಿ ಯೋಗೇಶ್ವರ್ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಜೆಡಿಎಸ್ ಬಿಟ್ಟುಕೊಡುವುದಿಲ್ಲ ಎನ್ನುವ ಹಠ ಹಿಡಿದಿದೆ. ಇದರ ಮಧ್ಯ ನಿಖಿಲ್ ಕುಮಾರಸ್ವಾಮಿ ಒಂದು ಸುಳಿವು ಕೊಟ್ಟಿದ್ದಾರೆ.
ಕೊಪ್ಪಳ, (ಸೆಪ್ಟೆಂಬರ್ 04): ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಮೈತ್ರಿ ಟಿಕೆಟ್ಗಾಗಿ ಭಾರೀ ಕಸತ್ತು ನಡೆದಿದೆ. ತಮಗೆ ಟಿಕೆಟ್ ಬೇಕೇ ಬೇಕು ಎಂದು ಬಿಜೆಪಿಯ ಸಿಪಿ ಯೋಗೇಶ್ವರ್ ಸಾಕಷ್ಟು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ನಮ್ಮ ಕ್ಷೇತ್ರವನ್ನ ಯಾವುದೇ ಕಾರಣಕ್ಕೂ ಬಿಜೆಪಿಗೆ ಬಿಟ್ಟು ಕೊಡುವುದಿಲ್ಲ ಎನ್ನುವ ಹಠಕ್ಕೆ ಜೆಡಿಎಸ್ ಬಿದ್ದಿದೆ. ಈ ಸಂಬಂಧ ದೆಹಲಿಯಲ್ಲಿ ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ನಡುವೆ ಸಭೆಗಳ ಮೇಲೆ ಸಭೆಗಳು ನಡೆಯುತ್ತಿವೆ. ಇದೆಲ್ಲದರ ಮಧ್ಯ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಫೋಟಕ ಸುಳಿವುವೊಂದನ್ನು ನೀಡಿದ್ದಾರೆ.
Published On - 8:16 pm, Wed, 4 September 24