ನಿಖಿಲ್ ಪ್ರಧಾನಿ ಮೋದಿಯವರ ಎನ್ಡಿಎ ಅಭ್ಯರ್ಥಿಯಾಗಿರುವುದರಿಂದ ಗೆಲ್ಲೋದು ನಿಶ್ಚಿತ: ಆರ್ ಅಶೋಕ
ಆರು ಬಾರಿ ಪಕ್ಷಾಂತರ ಮಾಡಿರುವುದನ್ನು ಹೇಳಿಕೊಂಡಿರುವ ಸಿಪಿ ಯೋಗೇಶ್ವರ್ ಬಿಜೆಪಿಗೆ ನೆಂಟನಂತಿದ್ದರು, ಅವರು ಸೋಲೋದು ನಿಶ್ಚಿತ, ಯಾಕೆಂದರೆ ಅವರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಯ್ಕೆಯೇ ಹೊರತು ನಿಖಿಲ್ ರಂತೆ ಕಾರ್ಯಕರ್ತರ ಆಯ್ಕೆಯಲ್ಲ, ಸಿಟ್ಟಿಗೆದ್ದಿರುವ ಚನ್ನಪಟ್ಟಣ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪರ ಕೆಲಸ ಮಾಡುವುದಾಗಿ ಹೇಳಿದ್ದಾರೆ ಎಂದು ಅಶೋಕ ಹೇಳಿದರು.
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿಯೆಂದು ಘೋಷಣೆಯಾದ ಬಳಿಕ ನಮ್ಮ ವರದಿಗಾರನೊಂದಿಗೆ ಮಾತಾಡಿದ ಬಿಜೆಪಿ ನಾಯಕ ಆರ್ ಅಶೋಕ ಅವರು, ನಿಖಿಲ್ ಪರ ಮತದಾರರ ಸಹಾನುಭೂತಿ ಇದೆ ಮತ್ತು ಅವರು ಎನ್ಡಿಎ ಪರವಾಗಿ ಸ್ಪರ್ಧೆ ಮಾಡುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ಕ್ಯಾಂಡಿಡೇಟ್ ಕೂಡ ಹೌದು, ಲೋಕಸಭಾ ಚುನಾವಣೆಯಲ್ಲಿ ಜನ ಎನ್ಡಿಎ ಒಕ್ಕೂಟವನ್ನು ಗೆಲ್ಲಿಸಿದ ಹಾಗೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ರನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಬೈ ಎಲೆಕ್ಷನ್: ಕೊನೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಘೋಷಣೆ
Latest Videos

ತವರಿನಲ್ಲಿ ಗೆದ್ದ ಆರ್ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ

‘ರಾಜ್ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
