ನಿಖಿಲ್ ಪ್ರಧಾನಿ ಮೋದಿಯವರ ಎನ್​ಡಿಎ ಅಭ್ಯರ್ಥಿಯಾಗಿರುವುದರಿಂದ ಗೆಲ್ಲೋದು ನಿಶ್ಚಿತ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Oct 24, 2024 | 6:08 PM

ಆರು ಬಾರಿ ಪಕ್ಷಾಂತರ ಮಾಡಿರುವುದನ್ನು ಹೇಳಿಕೊಂಡಿರುವ ಸಿಪಿ ಯೋಗೇಶ್ವರ್ ಬಿಜೆಪಿಗೆ ನೆಂಟನಂತಿದ್ದರು, ಅವರು ಸೋಲೋದು ನಿಶ್ಚಿತ, ಯಾಕೆಂದರೆ ಅವರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಯ್ಕೆಯೇ ಹೊರತು ನಿಖಿಲ್ ರಂತೆ ಕಾರ್ಯಕರ್ತರ ಆಯ್ಕೆಯಲ್ಲ, ಸಿಟ್ಟಿಗೆದ್ದಿರುವ ಚನ್ನಪಟ್ಟಣ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪರ ಕೆಲಸ ಮಾಡುವುದಾಗಿ ಹೇಳಿದ್ದಾರೆ ಎಂದು ಅಶೋಕ ಹೇಳಿದರು.

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿಯೆಂದು ಘೋಷಣೆಯಾದ ಬಳಿಕ ನಮ್ಮ ವರದಿಗಾರನೊಂದಿಗೆ ಮಾತಾಡಿದ ಬಿಜೆಪಿ ನಾಯಕ ಆರ್ ಅಶೋಕ ಅವರು, ನಿಖಿಲ್ ಪರ ಮತದಾರರ ಸಹಾನುಭೂತಿ ಇದೆ ಮತ್ತು ಅವರು ಎನ್​ಡಿಎ ಪರವಾಗಿ ಸ್ಪರ್ಧೆ ಮಾಡುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ಕ್ಯಾಂಡಿಡೇಟ್ ಕೂಡ ಹೌದು, ಲೋಕಸಭಾ ಚುನಾವಣೆಯಲ್ಲಿ ಜನ ಎನ್​ಡಿಎ ಒಕ್ಕೂಟವನ್ನು ಗೆಲ್ಲಿಸಿದ ಹಾಗೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ರನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣ ಬೈ ಎಲೆಕ್ಷನ್: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.