ಮೈಸೂರಿನ ಬನ್ನೂರಲ್ಲಿ ನಿಖಿಲ್ ಕುಮಾರಸ್ವಾಮಿ ರೋಡ್ ಶೋ, ಅಭಿಮಾನಿಗಳಿಂದ ಪುಷ್ಪಾರ್ಚನೆ, ಸೇಬುಹಣ್ಣುಗಳ ಹಾರ
ಜೆಡಿಎಸ್ ಬೆಂಬಲಿಗರು ಮತ್ತು ಅಭಿಮಾನಿಗಳು ಅವರ ಮೇಲೆ ಪುಷ್ಪಾರ್ಚನೆ ಮಾಡಿ ಸೇಬುಹಣ್ಣುಗಳ ಬೃಹತ್ ಗಾತ್ರದ ಹಾರವನ್ನು ಹಾಕಿದರು.
ಮೈಸೂರು: ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರ ಮಗ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಪ್ರಾರಂಭಿಸುವ ಬಗ್ಗೆ ಈಗಾಗಲೇ ಘೋಷಣೆಯಾಗಿದೆ. ಚುನಾವಣೆಯಲ್ಲಿ ನಿಖಿಲ್ ರನ್ನು ರಾಮನಗರದದಿಂದ (Ramanagara) ಕಣಕ್ಕಿಳಿಸುವ ಯೋಚನೆ ಕುಮಾರಸ್ವಾಮಿ ಅವರಿಗಿದೆ. ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬನ್ನೂರಲ್ಲಿ ನಿಖಿಲ್ ಶುಕ್ರವಾರ ರೋಡ್ ಶೋವೊಂದನ್ನು ನಡೆಸಿದರು. ಜೆಡಿಎಸ್ ಬೆಂಬಲಿಗರು ಮತ್ತು ಅಭಿಮಾನಿಗಳು ಅವರ ಮೇಲೆ ಪುಷ್ಪಾರ್ಚನೆ ಮಾಡಿ ಸೇಬುಹಣ್ಣುಗಳ ಬೃಹತ್ ಗಾತ್ರದ ಹಾರವನ್ನು ಹಾಕಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ