ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ವೇಳೆ 11 ಜನರ ಪ್ರಾಣಹಾನಿ ಆಗಿದೆ. ಕಾಲ್ತುಳಿತಕ್ಕೆ ಸಿಲುಕಿದ ಹಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ಆರ್ಸಿಬಿ (RCB) ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ (Stampede) ಸಂಭವಿಸಿದೆ. ಈ ವೇಳೆ 11 ಜನರ ಪ್ರಾಣಹಾನಿ ಆಗಿದೆ. ಕಾಲ್ತುಳಿತಕ್ಕೆ ಸಿಲುಕಿದ ಅನೇಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ‘18 ವರ್ಷಗಳ ಬಳಿಕ ಆರ್ಸಿಬಿ ವಿಜೇತರಾದರು. ಆರ್ಸಿಬಿ ಅಭಿಮಾನಿಗಳು ಕೋಟ್ಯಂತರ ಮಂದಿ ಇದ್ದಾರೆ. ಇಂದು ಮುಗ್ಧ ಅಭಿಮಾನಿಗಳು ಮೃತಪಟ್ಟಿದ್ದಾರೆ. ಯುವಕರೇ ಬಲಿಯಾಗಿರುವುದರಿಂದ ರಾಜ್ಯದ ಪ್ರತಿಯೊಬ್ಬರಿಗೂ ನೋವಾಗಿದೆ’ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos